ಇಪಿಎಫ್ಓ : ಮೇ 13 ರಂದು ಪಿಂಚಣಿ ಅದಾಲತ್
ಬಳ್ಳಾರಿ, 06 ಮೇ (ಹಿ.ಸ.) : ಆ್ಯಂಕರ್ : ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಮೇ 13 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್
ಇಪಿಎಫ್ಓ : ಮೇ 13 ರಂದು ಪಿಂಚಣಿ ಅದಾಲತ್


ಬಳ್ಳಾರಿ, 06 ಮೇ (ಹಿ.ಸ.) :

ಆ್ಯಂಕರ್ : ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಬಳ್ಳಾರಿ ಪ್ರಾದೇಶಿಕ ಕಚೇರಿ ವತಿಯಿಂದ ಪಿಂಚಣಿದಾರರ ಕುಂದು ಕೊರತೆ ಆಲಿಸಿ, ಪರಿಹರಿಸಲು ಮೇ 13 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 01 ಗಂಟೆಯವರೆಗೆ ನಗರದ ಪ್ರಾದೇಶಿಕ ಕಚೇರಿಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಬಳ್ಳಾರಿ, ವಿಜಯನಗರ, ಕೊಪ್ಪಳ, ಚಿತ್ರದುರ್ಗ ಜಿಲ್ಲೆಗಳ ಪಿಂಚಣಿದಾರರು ತಮ್ಮ ಕುಂದುಕೊರತೆಗಳಿದ್ದಲ್ಲಿ ಬಳ್ಳಾರಿ ಪ್ರಾದೇಶಿಕ ಕಚೇರಿಯ ಸಾರ್ವಜನಿಕ ಸಂಪರ್ಕ ಅಧಿಕಾರಿಗೆ ಪತ್ರ ಅಥವಾ ಇ-ಮೇಲ್ ಮೂಲಕ ಪಿ.ಪಿ.ಒ ಸಂಖ್ಯೆ, ವಿಳಾಸ, ದೂರವಾಣಿ, ಮೊಬೈಲ್ ಸಂಖ್ಯೆ ಮತ್ತು ಕುಂದು ಕೊರತೆಯ ಸ್ವರೂಪ ಹಾಗೂ ಇತ್ಯಾದಿಗಳನ್ನು ಅಂಚೆ ಪತ್ರದ ಮೂಲಕ ಮೇ 10 ರೊಳಗಾಗಿ ರವಾನಿಸಬಹುದಾಗಿದೆ. ಪತ್ರ ಲಕೋಟೆ ಮೇಲೆ ಪಿಂಚಣಿ ಅದಾಲತ್ ಎಂದು ಬರೆಯಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.08392-268943 ಗೆ ಸಂಪರ್ಕಿಸಬಹುದು ಎಂದು ಕ್ಷೇತ್ರಿಯ ಭವಿಷ್ಯ ನಿಧಿ ಆಯುಕ್ತ ಕೆ.ವಿ ಪ್ರವೀಣ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande