
ಶ್ರೀನಗರ, 06 ಮೇ (ಹಿ.ಸ.) :
ಆ್ಯಂಕರ್ : ಕಾಶ್ಮೀರದ ಪ್ರಸಿದ್ಧ ದಾಲ್ ಸರೋವರದಲ್ಲಿರುವ ದೋಣಿಮನೆಯಲ್ಲಿ ತಂಗಿದ್ದ ಅಮೆರಿಕದ ಪ್ರವಾಸಿಗರೊಬ್ಬರು ಬುಧವಾರ ಅಸ್ವಸ್ಥತೆಯಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಅಧಿಕಾರಿಗಳ ಪ್ರಕಾರ, ತಮ್ಮ ಪತ್ನಿ ಜುಡಿತ್ ಅನ್ನಿ ಮೆಕಾರ್ಥಿ ಅವರೊಂದಿಗೆ ಕಾಶ್ಮೀರ ಪ್ರವಾಸದಲ್ಲಿದ್ದ ಜಾನ್ ಡೇವಿಡ್ ಆಂಡರ್ಸನ್ ಮಧ್ಯರಾತ್ರಿಯಲ್ಲಿ ಏಕಾಏಕಿ ಅನಾರೋಗ್ಯಕ್ಕೆ ಒಳಗಾದರು. 83 ವರ್ಷದ ಆಂಡರ್ಸನ್ ಅವರನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಸಾವಿನ ನಿಖರ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa