ಭೀಮಾ ನದಿಗೆ 16 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ವಿಜಯಪುರ, 07 ಮೇ (ಹಿ.ಸ.): ಆಂಕರ್ : ಈ ಬಾರಿಯ ತೀವ್ರ ಬೇಸಿಗೆ ಮತ್ತು ಮಳೆಯ ಕೊರತೆಯಿಂದ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಉಂಟಾಗಿದ್ದ ಕುಡಿಯುವ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಅದರ ಫಲವಾಗಿ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ
ನೀರು


ವಿಜಯಪುರ, 07 ಮೇ (ಹಿ.ಸ.):

ಆಂಕರ್ : ಈ ಬಾರಿಯ ತೀವ್ರ ಬೇಸಿಗೆ ಮತ್ತು ಮಳೆಯ ಕೊರತೆಯಿಂದ ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಉಂಟಾಗಿದ್ದ ಕುಡಿಯುವ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿದ್ದು, ಅದರ ಫಲವಾಗಿ ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ 16 ಸಾವಿರ ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲಾಗಿದೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಸರ್ಕಾರ ಮಹಾರಾಷ್ಟ್ರ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರೆತಿರುವುದು ಸಂತಸದ ವಿಷಯ ಎಂದಿದ್ದಾರೆ.

ಭೀಮಾ ನದಿಗೆ ನೀರು ಹರಿದುಬರುವುದರಿಂದ ವಿಜಯಪುರ ಜಿಲ್ಲೆಯ ಇಂಡಿ ಸೇರಿದಂತೆ ಹಲವಾರು ಭಾಗಗಳಲ್ಲಿ ಎದುರಾಗಿದ್ದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಬೇಸಿಗೆಯ ತಾಪಮಾನ ಹೆಚ್ಚಳದಿಂದಾಗಿ ನದಿಗಳು, ಕೆರೆಗಳು ಮತ್ತು ಬಾವಿಗಳ ನೀರಿನ ಮಟ್ಟ ಗಣನೀಯವಾಗಿ ಕುಸಿದಿತ್ತು. ಗ್ರಾಮೀಣ ಭಾಗಗಳಲ್ಲಿ ಜನರು ಮತ್ತು ಜಾನುವಾರುಗಳು ತೀವ್ರ ನೀರಿನ ಸಂಕಷ್ಟ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ನಡೆಸಲಾಗಿತ್ತು. ಇದೀಗ ಉಜನಿ ಜಲಾಶಯದಿಂದ 16 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವುದು ಜನರಿಗೆ ದೊಡ್ಡ ಮಟ್ಟದ ನೆಮ್ಮದಿ ನೀಡಲಿದೆ” ಎಂದು ಅವರು ಹೇಳಿದ್ದಾರೆ.

ಭೀಮಾ ನದಿಗೆ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ನದಿಯ ತಟ ಪ್ರದೇಶಗಳ ಗ್ರಾಮಗಳಲ್ಲಿ ಸಂತಸದ ವಾತಾವರಣ ನಿರ್ಮಾಣವಾಗಿದೆ. ರೈತರು, ಸಾರ್ವಜನಿಕರು ಹಾಗೂ ಪಶುಪಾಲಕರು ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ನೀರು ಹರಿದುಬರುವುದರಿಂದ ಕುಡಿಯುವ ನೀರಿನ ಜೊತೆಗೆ ಜಾನುವಾರುಗಳಿಗೆ ಅಗತ್ಯವಿರುವ ನೀರಿನ ಸಮಸ್ಯೆಯೂ ಬಹುತೇಕ ಕಡಿಮೆಯಾಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಇನ್ನೂ ಮುಂದಿನ ದಿನಗಳಲ್ಲಿ ನೀರಿನ ಸಮರ್ಪಕ ನಿರ್ವಹಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜನರ ಹಿತಾಸಕ್ತಿಯೇ ಸರ್ಕಾರದ ಪ್ರಮುಖ ಆದ್ಯತೆ ಎಂಬುದಾಗಿ ಯಶವಂತರಾಯಗೌಡ ಪಾಟೀಲ ತಿಳಿಸಿದ್ದಾರೆ.

ರಾಜ್ಯದಲ್ಲಿ ತೀವ್ರ ಬಿಸಿಲಿನ ನಡುವೆ ನೀರಿನ ಅಭಾವ ದೊಡ್ಡ ಸವಾಲಾಗಿ ಪರಿಣಮಿಸಿದ್ದ ಸಂದರ್ಭದಲ್ಲಿ ಉಜನಿ ಜಲಾಶಯದಿಂದ ನೀರು ಬಿಡುಗಡೆಗೊಂಡಿರುವುದು ಉತ್ತರ ಕರ್ನಾಟಕ ಭಾಗಕ್ಕೆ ಮಹತ್ವದ ನೆರವಾಗಲಿದೆ ಎನ್ನಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande