ಜನ್ಮಜಾತ ವೈಕಲ್ಯ ಹೊಂದಿದ ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ಅಗತ್ಯ: ದಿನೇಶ್ ಗುಂಡೂರಾವ್
ಮೈಸೂರು, 07 ಮೇ (ಹಿ.ಸ.): ಆ್ಯಂಕರ್: ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಎಐಐಎಸ್‌ಎಚ್) ಮೈಸೂರಿನ ನೈಮಿಶಾಮ್ ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ 24ನೇ ವಾರ್ಷಿಕ ಸಮ್ಮೇಳನ “ಇಂಡೋ ಕ್ಲೆಫ್ಟ್‌ಕಾನ್–2026” ಅನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರ
ಗುಂಡೂರಾವ್


ಮೈಸೂರು, 07 ಮೇ (ಹಿ.ಸ.):

ಆ್ಯಂಕರ್:

ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ (ಎಐಐಎಸ್‌ಎಚ್) ಮೈಸೂರಿನ ನೈಮಿಶಾಮ್ ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ 24ನೇ ವಾರ್ಷಿಕ ಸಮ್ಮೇಳನ “ಇಂಡೋ ಕ್ಲೆಫ್ಟ್‌ಕಾನ್–2026” ಅನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೀಳು ತುಟಿ ಸೇರಿದಂತೆ ಜನ್ಮಜಾತ ವೈಕಲ್ಯಗಳು ಮಕ್ಕಳ ಆತ್ಮವಿಶ್ವಾಸ ಹಾಗೂ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಆದರೆ ಇಂತಹ ಮಕ್ಕಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ ಸೂಕ್ತ ಚಿಕಿತ್ಸೆ, ಸಲಹೆ ಮತ್ತು ಪುನರ್ವಸತಿ ಸೇವೆಗಳನ್ನು ನೀಡುವುದು ಅತ್ಯಂತ ಅಗತ್ಯ ಎಂದು ಹೇಳಿದರು.

ಇಂತಹ ಮಕ್ಕಳು ಸಮಾಜದ ಮುಖ್ಯವಾಹಿನಿಯಿಂದ ದೂರವಾಗಬಾರದು. ಅವರಿಗೆ ಗುಣಮಟ್ಟದ ಚಿಕಿತ್ಸೆ, ಉತ್ತಮ ಶಿಕ್ಷಣ ಹಾಗೂ ಆತ್ಮವಿಶ್ವಾಸ ತುಂಬುವ ವಾತಾವರಣ ಕಲ್ಪಿಸುವುದು ಸಮಾಜದ ಸಮೂಹ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ಪ್ರತಿಯೊಬ್ಬ ಮಗುವಿಗೂ ಸಮಾನ ಅವಕಾಶ ಹಾಗೂ ಗೌರವಯುತ ಬದುಕು ದೊರಕಬೇಕು ಎಂಬ ಬದ್ಧತೆಯೊಂದಿಗೆ ಸರ್ಕಾರ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ತಜ್ಞರು, ವೈದ್ಯರು, ಸಂಶೋಧಕರು ಹಾಗೂ ಸೇವಾ ಮನೋಭಾವದ ಸಂಸ್ಥೆಗಳು ಒಂದೇ ವೇದಿಕೆಯಲ್ಲಿ ಸೇರಿ ಚರ್ಚಿಸುವ ಇಂತಹ ಸಮ್ಮೇಳನಗಳು ಹೊಸ ಚಿಕಿತ್ಸಾ ವಿಧಾನಗಳ ಅಭಿವೃದ್ಧಿಗೆ ಹಾಗೂ ಸಮಾಜದಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗುತ್ತವೆ ಎಂದು ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.

ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಕುರಿತು ಜಾಗೃತಿ ಮೂಡಿಸುವ ಸಮಾಜಮುಖಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿದ ಸಂಘಟಕರನ್ನು ಅವರು ಅಭಿನಂದಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande