ಸಾಮಾಜಿಕ ಸಾಮರಸ್ಯದಿಂದಲೇ ಶಕ್ತಿಶಾಲಿ ರಾಷ್ಟ್ರ ನಿರ್ಮಾಣ : ಡಾ. ಮೋಹನ್ ಭಾಗವತ್
ಮೈಸೂರು, 07 ಮೇ (ಹಿ.ಸ.) : ಆ್ಯಂಕರ್ : ಸಮಾಜದಲ್ಲಿ ಸಾಮರಸ್ಯ, ಪರಸ್ಪರ ವಿಶ್ವಾಸ ಮತ್ತು ಸೇವಾ ಮನೋಭಾವ ಬೆಳೆದಾಗ ಮಾತ್ರ ಶಕ್ತಿಶಾಲಿ ರಾಷ್ಟ್ರ ನಿರ್ಮಾಣ ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹೇಳಿದರು. ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠ ವತಿಯಿಂದ ಸ
ಪುಸ್ತಕ ಬಿಡುಗಡೆ


ಕಾರ್ಯಕ್ರಮದಲ್ಲಿ. ಮಾತನಾಡಿದ ಮೋಹನ್ ಭಾಗವತ್


ಮೈಸೂರು, 07 ಮೇ (ಹಿ.ಸ.) :

ಆ್ಯಂಕರ್ : ಸಮಾಜದಲ್ಲಿ ಸಾಮರಸ್ಯ, ಪರಸ್ಪರ ವಿಶ್ವಾಸ ಮತ್ತು ಸೇವಾ ಮನೋಭಾವ ಬೆಳೆದಾಗ ಮಾತ್ರ ಶಕ್ತಿಶಾಲಿ ರಾಷ್ಟ್ರ ನಿರ್ಮಾಣ ಸಾಧ್ಯವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹೇಳಿದರು.

ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠ ವತಿಯಿಂದ ಸುತ್ತೂರು ಮಠದ ಆವರಣದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ವಿಶೇಷ ಉಪನ್ಯಾಸ ಸರಣಿಯಲ್ಲಿ ಗುರುವಾರ ಮಾತನಾಡಿದ ಅವರು, “ಸಾಮಾಜಿಕ ಸಾಮರಸ್ಯ ರಾಷ್ಟ್ರದ ಪ್ರಗತಿಗೆ ಪ್ರಮುಖ ಆಧಾರ. ಸಮಾಜ ವಿಭಜನೆಯಾದರೆ ರಾಷ್ಟ್ರ ದುರ್ಬಲವಾಗುತ್ತದೆ. ಸಮಾಜ ಒಂದಾದರೆ ದೇಶ ಅಜೇಯವಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ಭಾರತವು ಸಾವಿರಾರು ವರ್ಷಗಳ ಸಂಸ್ಕೃತಿ, ಮೌಲ್ಯ ಮತ್ತು ಪರಂಪರೆಯನ್ನು ಹೊಂದಿರುವ ದೇಶ. ಭಾಷೆ, ಆಚರಣೆ, ಸಂಪ್ರದಾಯಗಳಲ್ಲಿ ವೈವಿಧ್ಯ ಇದ್ದರೂ ಭಾರತೀಯ ಸಮಾಜವನ್ನು ಒಗ್ಗೂಡಿಸುವ ಶಕ್ತಿ ಸಂಸ್ಕೃತಿಯಲ್ಲಿದೆ ಎಂದು ಹೇಳಿದರು. “ಭಾರತದ ಶಕ್ತಿ ವೈವಿಧ್ಯದಲ್ಲಿರುವ ಏಕತೆ. ಎಲ್ಲರನ್ನು ಜೊತೆಗಿಟ್ಟುಕೊಂಡು ಸಾಗುವ ಮನೋಭಾವ ನಮ್ಮ ಪರಂಪರೆ” ಎಂದು ಹೇಳಿದರು.

ಸಮಾಜದಲ್ಲಿ ಜಾತಿ, ವರ್ಗ, ಪ್ರಾಂತ ಮತ್ತು ಭಾಷೆಯ ಆಧಾರದ ಭೇದಭಾವ ನಿವಾರಣೆಯಾಗಬೇಕು. ಪ್ರತಿಯೊಬ್ಬ ವ್ಯಕ್ತಿಗೂ ಸಮಾನ ಗೌರವ ಸಿಗಬೇಕು. ಸೇವೆ ಮತ್ತು ಸಹಕಾರದ ಮನೋಭಾವದಿಂದ ಸಮಾಜ ಬಲವಾಗುತ್ತದೆ ಎಂದು ಹೇಳಿದರು.

ಕುಟುಂಬ ವ್ಯವಸ್ಥೆ ಭಾರತೀಯ ಸಂಸ್ಕೃತಿಯ ಅತ್ಯಂತ ದೊಡ್ಡ ಬಲವಾಗಿದೆ. ಕುಟುಂಬದಲ್ಲಿ ಸಂಸ್ಕಾರ, ಮೌಲ್ಯ ಮತ್ತು ಜವಾಬ್ದಾರಿಯ ಅರಿವು ಬೆಳೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಯುವಜನತೆ ಕೇವಲ ಉದ್ಯೋಗಕ್ಕಾಗಿ ಶಿಕ್ಷಣ ಪಡೆಯದೇ, ದೇಶ ಮತ್ತು ಸಮಾಜದ ಬಗ್ಗೆ ಜವಾಬ್ದಾರಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.

ಭಾರತದ ಅಭಿವೃದ್ಧಿ ಕೇವಲ ಆರ್ಥಿಕ ಪ್ರಗತಿಯಿಂದ ಅಳೆಯಲಾಗುವುದಿಲ್ಲ. ಸಮಾಜದಲ್ಲಿ ನೈತಿಕತೆ, ಶಿಸ್ತು ಮತ್ತು ಸಹೋದರತ್ವ ಬೆಳೆದಾಗ ಮಾತ್ರ ನಿಜವಾದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ ಅವರ

‘ಆತ್ಮನೋ ಮೋಕ್ಷಾರ್ಥಂ ಜಗತ್ ಹಿತಾಯ ಚ’ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ಉಪನ್ಯಾಸ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದ ಗಣ್ಯರು, ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande