ರಾಜ್ಯದಲ್ಲಿ ಮುಂದಿನ 7 ದಿನ ಒಣಹವೆ ನಡುವೆ ಗುಡುಗು, ಮಳೆಯ ಸಾಧ್ಯತೆ
ಬೆಂಗಳೂರು, 08 ಮೇ (ಹಿ.ಸ.) : ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಮಧ್ಯಾಹ್ನದ ನಂತರ ಹಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿ,
Imd


ಬೆಂಗಳೂರು, 08 ಮೇ (ಹಿ.ಸ.) :

ಆ್ಯಂಕರ್ : ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆಯ ಪ್ರಕಾರ, ಮುಂದಿನ ಏಳು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಒಣಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಮಧ್ಯಾಹ್ನದ ನಂತರ ಹಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗಿ, ಅಲ್ಲಲ್ಲಿ ಗುಡುಗು-ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ವಿಶೇಷವಾಗಿ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದು ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಗುಡುಗು ಮತ್ತು ಸಿಡಿಲಿನ ಸಂದರ್ಭಗಳಲ್ಲಿ ತೆರೆದ ಜಾಗಗಳಲ್ಲಿ ನಿಲ್ಲುವುದನ್ನು ತಪ್ಪಿಸಬೇಕು. ರೈತರು ಬೆಳೆ ಕೊಯ್ಲು ಹಾಗೂ ಒಣಗಿಸುವ ಕಾರ್ಯಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ. ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ದುರ್ಬಲ ಕಟ್ಟಡಗಳು, ಜಾಹೀರಾತು ಫಲಕಗಳು ಹಾಗೂ ಮರಗಳ ಸಮೀಪ ಜಾಗರೂಕರಾಗಿರಬೇಕೆಂದು ಇಲಾಖೆ ತಿಳಿಸಿದೆ.

ಕರಾವಳಿ ಭಾಗಗಳಲ್ಲಿಯೂ ಉಷ್ಣ ಹಾಗೂ ತೇವಾಂಶಯುಕ್ತ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಮಳೆಯ ಸಾಧ್ಯತೆ ಇದೆ. ಬೆಂಗಳೂರನ್ನು ಒಳಗೊಂಡಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಧ್ಯಾಹ್ನದ ನಂತರ ಮೋಡ ಕವಿದ ವಾತಾವರಣ ಹಾಗೂ ತುಂತುರು ಅಥವಾ ಸಾಧಾರಣ ಮಳೆಯ ಸಾಧ್ಯತೆ ಇದೆ.

ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯ ಸಾಧ್ಯತೆ ಹಿನ್ನೆಲೆ ಸ್ಥಳೀಯ ಆಡಳಿತಗಳು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande