ಬಿಜೆಪಿಯಿಂದ ಸಂಘಟನೆ ಬಲವರ್ಧನೆಗೆ ಒತ್ತು
ಗದಗ, 12 ಜೂನ್ (ಹಿ.ಸ.) : ಆ್ಯಂಕರ್ : ಭಾರತೀಯ ಜನತಾ ಪಾರ್ಟಿಯ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಬಿಜೆಪಿ ಗದಗ ನಗರ ಮಂಡಲ ಮಹಿಳಾ ಮೋರ್ಚಾ ಪದಾಧಿಕಾರಿಗಳ ಸಭೆ ನಗರದ ಪಕ್ಷದ ಕಚೇರಿಯಲ್ಲಿ ಜರುಗಿತು. ಸಭೆಯಲ್ಲಿ ಸಂಘಟನಾ ಬಲವರ್ಧನೆ, ಮಹಿಳಾ ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆ, ಕ
ಫೋಟೋ


ಗದಗ, 12 ಜೂನ್ (ಹಿ.ಸ.) :

ಆ್ಯಂಕರ್ : ಭಾರತೀಯ ಜನತಾ ಪಾರ್ಟಿಯ ಸಂಘಟನಾ ಚಟುವಟಿಕೆಗಳಿಗೆ ಮತ್ತಷ್ಟು ವೇಗ ನೀಡುವ ಉದ್ದೇಶದಿಂದ ಬಿಜೆಪಿ ಗದಗ ನಗರ ಮಂಡಲ ಮಹಿಳಾ ಮೋರ್ಚಾ ಪದಾಧಿಕಾರಿಗಳ ಸಭೆ ನಗರದ ಪಕ್ಷದ ಕಚೇರಿಯಲ್ಲಿ ಜರುಗಿತು. ಸಭೆಯಲ್ಲಿ ಸಂಘಟನಾ ಬಲವರ್ಧನೆ, ಮಹಿಳಾ ಸದಸ್ಯರ ಸಕ್ರಿಯ ಪಾಲ್ಗೊಳ್ಳುವಿಕೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳನ್ನು ಮನೆ-ಮನೆಗೆ ತಲುಪಿಸುವ ಕುರಿತು ಸವಿಸ್ತಾರ ಚರ್ಚೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಗದಗ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವಾತಿ ಅಕ್ಕಿ ವಹಿಸಿಕೊಂಡು ಮಾತನಾಡಿ, ಪಕ್ಷದ ತತ್ವ-ಸಿದ್ಧಾಂತಗಳನ್ನು ಸಮಾಜದ ಪ್ರತಿಯೊಂದು ವರ್ಗಕ್ಕೂ ತಲುಪಿಸುವಲ್ಲಿ ಮಹಿಳಾ ಕಾರ್ಯಕರ್ತೆಯರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಮಹಿಳಾ ಮೋರ್ಚಾ ಕೇವಲ ರಾಜಕೀಯ ಸಂಘಟನೆಯಲ್ಲ, ಸಮಾಜದಲ್ಲಿ ಮಹಿಳೆಯರ ಸಬಲೀಕರಣ ಹಾಗೂ ನಾಯಕತ್ವ ಬೆಳೆಸುವ ವೇದಿಕೆಯಾಗಿದೆ ಎಂದು ಅವರು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗದಗ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ ಮಾತನಾಡಿ, ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರ ಕೊಡುಗೆ ಅತ್ಯಂತ ಶ್ಲಾಘನೀಯವಾಗಿದೆ ಎಂದರು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಜನಕಲ್ಯಾಣ ಯೋಜನೆಗಳು ಮತ್ತು ಮಹಿಳೆಯರ ಅಭಿವೃದ್ಧಿಗೆ ಸಂಬಂಧಿಸಿದ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜವಾಬ್ದಾರಿ ಕಾರ್ಯಕರ್ತೆಯರ ಮೇಲಿದೆ ಎಂದು ಹೇಳಿದರು.

ಪ್ರಧಾನ ಕಾರ್ಯದರ್ಶಿ ಶಂಕರ ಕಾಕಿ ಮಾತನಾಡಿ, ಪಕ್ಷದ ಸಂಘಟನಾ ಚಟುವಟಿಕೆಗಳನ್ನು ವಾರ್ಡ್ ಮಟ್ಟದಿಂದ ಬೂತ್ ಮಟ್ಟದವರೆಗೆ ಬಲಪಡಿಸುವ ನಿಟ್ಟಿನಲ್ಲಿ ಕಾರ್ಯಕರ್ತೆಯರು ಸಕ್ರಿಯವಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಬರುವ ದಿನಗಳಲ್ಲಿ ಪಕ್ಷ ಹಮ್ಮಿಕೊಳ್ಳಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸಬೇಕೆಂದು ತಿಳಿಸಿದರು.

ಸಭೆಯಲ್ಲಿ ಬಿಎಲ್ಎ-1 ಮಂಜುನಾಥ ಶಾಂತಗೇರಿ ಮತದಾರರ ಪಟ್ಟಿಯ ಪರಿಷ್ಕರಣೆ, ಹೊಸ ಮತದಾರರ ನೋಂದಣಿ ಹಾಗೂ ಬೂತ್ ಮಟ್ಟದ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಮತದಾರರೊಂದಿಗೆ ನಿರಂತರ ಸಂಪರ್ಕ ಬೆಳೆಸುವ ಮೂಲಕ ಪಕ್ಷದ ಸಂಘಟನೆಯನ್ನು ಬಲಪಡಿಸುವ ಅಗತ್ಯವಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಕವಿತಾ ಬಂಗಾರಿ, ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಪವಿತ್ರಾ ಮುದಗಲ್ಲ ಹಾಗೂ ಶಾಂತಾ ತಿಮ್ಮಾಪೂರ, ಪ್ರಧಾನ ಕಾರ್ಯದರ್ಶಿಗಳಾದ ಪುಷ್ಪಾ ಪೂಜಾರ ಮತ್ತು ರೇಖಾ ಗವಳಿ, ಕೋಶಾಧ್ಯಕ್ಷೆ ಗೀತಾ ಅಣ್ಣಿಗೇರಿ, ಕಾರ್ಯದರ್ಶಿಗಳಾದ ನಿರ್ಮಲಾ ಬಳ್ಳಿ ಹಾಗೂ ಭುವನೇಶ್ವರಿ ಹಿರೇಮಠ ಅವರು ಸಂಘಟನಾ ಚಟುವಟಿಕೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಮಹಿಳಾ ಮೋರ್ಚಾದ ಸದಸ್ಯರಾದ ಸಂಕೇತಾ ಶಿದ್ಲಿಂಗ, ಮಂಗಳಾ ರಾಯಭಾಗಿ, ಸರೋಜಾ ಬಾರಕೇರ, ರಾಜೇಶ್ವರಿ ಜವಳಿ, ಶೈಲಜಾ ಜೊಸೆಫ್, ಜಯಶ್ರೀ ಕಮತರ ಸೇರಿದಂತೆ ಹಲವಾರು ಪದಾಧಿಕಾರಿಗಳು ಮತ್ತು ಕಾರ್ಯಕರ್ತೆಯರು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಮಹಿಳಾ ಮೋರ್ಚಾದ ಮುಂದಿನ ಕಾರ್ಯಕ್ರಮಗಳು, ಸದಸ್ಯತ್ವ ಅಭಿಯಾನ, ಮಹಿಳಾ ಸಬಲೀಕರಣ ಚಟುವಟಿಕೆಗಳು ಹಾಗೂ ಪಕ್ಷದ ಸಂಘಟನಾ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವಲ್ಲಿ ಮಹಿಳಾ ಕಾರ್ಯಕರ್ತೆಯರು ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಮುಖಂಡರು ಕರೆ ನೀಡಿದರು.

ಸಭೆಯು ಸಂಘಟನಾ ಚಟುವಟಿಕೆಗಳಿಗೆ ಹೊಸ ಚೈತನ್ಯ ತುಂಬಿದ್ದು, ಮುಂದಿನ ದಿನಗಳಲ್ಲಿ ಮಹಿಳಾ ಮೋರ್ಚಾ ಮೂಲಕ ಪಕ್ಷದ ಬಲವರ್ಧನೆಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂಬ ವಿಶ್ವಾಸವನ್ನು ಮುಖಂಡರು ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande