ವಿಶೇಷ ಮಕ್ಕಳಿಗೆ ಸಿಹಿ ಊಟ ವಿತರಣೆ
ಗದಗ, 12 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ಕಲ್ಯಾಣ ಗದಗ ಸಂಸ್ಥೆಯ ಸಂಚಾಲಿತ ಭುವನೇಶ್ವರಿ ವಿಶೇಷ ಅಗತ್ಯವುಳ್ಳ ಮಕ್ಕಳ ಶಾಲೆಯಲ್ಲಿ ಅಧಿಕಮಾಸದ ನಿಮಿತ್ತ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ವಿಶೇಷ ಮಕ್ಕಳಿಗೆ ಸಿಹಿಯೊಂದಿಗೆ ಪ್ರಸಾದ ಸೇವೆಯನ್ನು ಮಾಡಲಾಯಿತು ಕಾರ್ಯಕ್ರಮದಲ್ಲಿ ಸಮಾಜಸೇವಕಿ
ಫೋಟೋ


ಗದಗ, 12 ಜೂನ್ (ಹಿ.ಸ.) :

ಆ್ಯಂಕರ್ : ವಿಶ್ವ ಕಲ್ಯಾಣ ಗದಗ ಸಂಸ್ಥೆಯ ಸಂಚಾಲಿತ ಭುವನೇಶ್ವರಿ ವಿಶೇಷ ಅಗತ್ಯವುಳ್ಳ ಮಕ್ಕಳ ಶಾಲೆಯಲ್ಲಿ ಅಧಿಕಮಾಸದ ನಿಮಿತ್ತ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ವಿಶೇಷ ಮಕ್ಕಳಿಗೆ ಸಿಹಿಯೊಂದಿಗೆ ಪ್ರಸಾದ ಸೇವೆಯನ್ನು ಮಾಡಲಾಯಿತು

ಕಾರ್ಯಕ್ರಮದಲ್ಲಿ ಸಮಾಜಸೇವಕಿ ನಿರ್ಮಲಾ ಷಡಾಕ್ಷರಯ್ಯ ಕರಿಸಿದ್ಧಿಮಠ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿಶೇಷ ಮಕ್ಕಳಿಗೆ ಪ್ರೀತಿಯಿಂದ ಊಟವನ್ನು ಬಡಿಸಿ, ಮಾನವೀಯ ಸೇವೆಯ ಮಹತ್ವವನ್ನು ಸಾರಿದರು.

ಅವರು ಮಾತನಾಡುತ್ತಾ, ದೇವರ ಸ್ವರೂಪಿಗಳಾದ ವಿಶೇಷ ಅಗತ್ಯವುಳ್ಳ ಮಕ್ಕಳು ಸಮಾಜದ ಅಮೂಲ್ಯ ಭಾಗವಾಗಿದ್ದು, ಅವರಿಗೆ ಪ್ರೀತಿ, ಗೌರವ ಮತ್ತು ಸೂಕ್ತ ಅವಕಾಶಗಳನ್ನು ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು. ಅಧಿಕಮಾಸದ ಪವಿತ್ರ ಸಂದರ್ಭದಲ್ಲಿ ಇಂತಹ ಮಕ್ಕಳಿಗೆ ಸಿಹಿಯೊಂದಿಗೆ ಊಟ ಬಡಿಸಲು ಅವಕಾಶ ಸಿಕ್ಕಿದ್ದು ತನ್ನ ಸೌಭಾಗ್ಯ ಎಂದು ಅವರು ಅಭಿಪ್ರಾಯಪಟ್ಟರು.

ಅವರು ಮುಂದುವರಿದು, ಅಧಿಕಮಾಸದ ಶುಕ್ರವಾರ ತಾಯಿ ಜಗನ್ಮಾತೆ ಎಲ್ಲರಿಗೂ ಶುಭ ಮತ್ತು ಸನ್ಮಂಗಲವನ್ನು ನೀಡಲೆಂದು ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಮಂಜುನಾಥ ಹದ್ದಣ್ಣವರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ವಿಶೇಷ ಮಕ್ಕಳಿಗೆ ನಿರಂತರವಾಗಿ ಸೇವೆ ಸಲ್ಲಿಸುವಲ್ಲಿ ಶ್ರೀಮತಿ ನಿರ್ಮಲಾ ಕರಿಸಿದ್ಧಿಮಠ ಅವರ ಕೊಡುಗೆ ಶ್ಲಾಘನೀಯವಾಗಿದೆ ಎಂದು ಹೇಳಿದರು.

ಅವರು ಸಂಸ್ಥೆಯ ಸೇವಾ ಕಾರ್ಯಗಳಿಗೆ ಅವರು ಸದಾ ಬೆನ್ನೆಲುಬಾಗಿ ನಿಂತು ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದರು ಹಾಗೂ ಅವರ ಆರೋಗ್ಯ ಮತ್ತು ಸಕಲ ಇಷ್ಟಾರ್ಥಗಳು ನೆರವೇರಲೆಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳು, ಪಾಲಕರು ಹಾಗೂ ಸಂಸ್ಥೆಯ ಸಿಬ್ಬಂದಿ ಭಾಗವಹಿಸಿದ್ದರು. ಅಂತ್ಯದಲ್ಲಿ ಎಲ್ಲ ಮಕ್ಕಳಿಗೂ ಹಾಗೂ ಉಪಸ್ಥಿತರಿಗೆ ಸಿಹಿಯೊಂದಿಗೆ ಊಟವನ್ನು ಬಡಿಸಲಾಯಿತು. ಕಾರ್ಯಕ್ರಮದಲ್ಲಿ ಕಂಡ ಮಾನವೀಯತೆ ಮತ್ತು ಪ್ರೀತಿ ಎಲ್ಲರ ಮನಸ್ಸನ್ನು ಸ್ಪರ್ಶಿಸಿತು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande