ಕುಡಿಯುವ ನೀರಿನ ಸಮಸ್ಯೆ ಕುರಿತು ಸ್ಥಳ ಪರಿಶೀಲನೆ
ಗದಗ, 12 ಜೂನ್ (ಹಿ.ಸ.) : ಆ್ಯಂಕರ್ : ಗದಗ ನರಗುಂದ ತಾಲೂಕಿನ ಹದಲಿ ಗ್ರಾಮ ಪಂಚಾಯಿತಿ ಕಚೇರಿಗೆ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಅವರು ಸಾಯಂಕಾಲ ಭೇಟಿ ನೀಡಿ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು. ಭೇಟಿ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಹಾ
ಫೋಟೋ


ಗದಗ, 12 ಜೂನ್ (ಹಿ.ಸ.) :

ಆ್ಯಂಕರ್ : ಗದಗ ನರಗುಂದ ತಾಲೂಕಿನ ಹದಲಿ ಗ್ರಾಮ ಪಂಚಾಯಿತಿ ಕಚೇರಿಗೆ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ ಅವರು ಸಾಯಂಕಾಲ ಭೇಟಿ ನೀಡಿ ಆಡಳಿತಾತ್ಮಕ ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು.

ಭೇಟಿ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಹಾಜರಾತಿ ಪುಸ್ತಕವನ್ನು ಪರಿಶೀಲಿಸಿದ ಅವರು, ಅನಧಿಕೃತವಾಗಿ ಗೈರುಹಾಜರಾಗುವ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಿಡಿಓ ಅವರಿಗೆ ಸೂಚನೆ ನೀಡಿದರು. ಕಚೇರಿ ಸಮಯದಲ್ಲಿ ಸಿಬ್ಬಂದಿಗಳು ಹೊರಗಡೆ ತೆರಳುವ ಸಂದರ್ಭದಲ್ಲಿ ಚಲನವಲನ ಪುಸ್ತಕದಲ್ಲಿ ಭೇಟಿ ಸ್ಥಳ ಹಾಗೂ ಕಾರಣವನ್ನು ಕಡ್ಡಾಯವಾಗಿ ದಾಖಲಿಸುವಂತೆ ತಿಳಿಸಿದರು.

ಇದೇ ವೇಳೆ ನಗದು ಘೋಷಣೆ ರಜಿಸ್ಟರ್ ಹಾಗೂ ತೆರಿಗೆ ವಸೂಲಾತಿ ಮೊತ್ತವನ್ನು ಬ್ಯಾಂಕ್ ಗೆ ಜಮಾ ಮಾಡಿರುವ ರೆಮಿಟೆನ್ಸ್ ರಜಿಸ್ಟರ್ಗಳನ್ನು ಪರಿಶೀಲಿಸಿ ಮಾಹಿತಿ ಪಡೆದರು.

ಗ್ರಾಮದಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ, ಇಓ ಅವರು ಗ್ರಾಮದಲ್ಲಿ ಸಂಚರಿಸಿ ಸ್ಥಳೀಯ ನಿವಾಸಿಗಳೊಂದಿಗೆ ಸಮಾಲೋಚನೆ ನಡೆಸಿದರು. ವಿವಿಧ ಓಣಿಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮಸ್ಥರಿಂದ ಮಾಹಿತಿ ಸಂಗ್ರಹಿಸಿದರು.

ಬಳಿಕ ಸ್ಥಳದಲ್ಲಿದ್ದ ಪಿಡಿಓ ಅವರಿಗೆ ವಾಟರ್ ಬೋರ್ಡ್ ಹಾಗೂ ಡಿಬಿಓಟಿ ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಿ, ಗ್ರಾಮಸ್ಥರಿಗೆ ನಿಗದಿತ ಸಮಯದಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ನರಗುಂದ ವಿಧಾನಸಭಾ ಶಾಸಕರು ಸಿ.ಸಿ.ಪಾಟೀಲ್ ಅವರ ನೇತೃತ್ವದಲ್ಲಿ ಜೂನ್-೦೧ ರಂದು ನಡೆದ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಹದಲಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಕುರಿತು ಚರ್ಚೆಯಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande