ರಾಜ್ಯಸಭೆಗೆ ಅವಿರೋಧ ಆಯ್ಕೆಯಾದ ಮನ್ಸೂರ್ ಅಲಿ ಖಾನ್ಗೆ ಸಿದ್ದರಾಮಯ್ಯ ಅಭಿನಂದನೆ
ಬೆಂಗಳೂರು, 12 ಜೂನ್ (ಹಿ.ಸ.): ಆ್ಯಂಕರ್: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆಯಾದ ಮನ್ಸೂರ್ ಅಲಿ ಖಾನ್ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದ
congratulates


ಬೆಂಗಳೂರು, 12 ಜೂನ್ (ಹಿ.ಸ.):

ಆ್ಯಂಕರ್:

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆಯಾದ ಮನ್ಸೂರ್ ಅಲಿ ಖಾನ್ ಅವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಮನ್ಸೂರ್ ಅಲಿ ಖಾನ್ ಅವರು ರಾಜ್ಯದ ಹಾಗೂ ಪಕ್ಷದ ಹಿತಾಸಕ್ತಿಗಳನ್ನು ರಾಜ್ಯಸಭೆಯಲ್ಲಿ ಸಮರ್ಥವಾಗಿ ಪ್ರತಿನಿಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಅವರ ಆಯ್ಕೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಮತ್ತಷ್ಟು ಬಲ ದೊರೆಯಲಿದೆ ಎಂದು ಹೇಳಿದರು.

ಮನ್ಸೂರ್ ಅಲಿ ಖಾನ್ ಅವರು ಪಕ್ಷದ ನಾಯಕರಿಗೆ ಹಾಗೂ ಶಾಸಕರಿಗೆ ಕೃತಜ್ಞತೆ ಸಲ್ಲಿಸಿ, ರಾಜ್ಯದ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ರಾಜ್ಯಸಭೆಯಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande