
ಬೆಂಗಳೂರು, 12 ಜೂನ್ (ಹಿ.ಸ.) :
ಆ್ಯಂಕರ್ : ತಡೆಗಟ್ಟುವಿಕೆ ಚಿಕಿತ್ಸೆಗಿಂತ ಉತ್ತಮ ಎಂಬ ಧ್ಯೇಯವಾಕ್ಯದೊಂದಿಗೆ ಜನರ ಆರೋಗ್ಯಕರ ಜೀವನಕ್ಕಾಗಿ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಪಿಸಿಎ ಟ್ರಸ್ಟ್ ಮತ್ತು ನಂದನಾ ಕ್ಲಿನಿಕ್ ಸಹಯೋಗದಲ್ಲಿ ನಾಳೆ ಬೆಂಗಳೂರಿನಲ್ಲಿ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ವೈದ್ಯರ ಸಲಹೆ, ದೇಹದ ತೂಕ ಸೂಚ್ಯಂಕ, ರಕ್ತದೊತ್ತಡ, ರಕ್ತದ ಸಕ್ಕರೆ, ಹಿಮೋಗ್ಲೋಬಿನ್ ಹಾಗೂ SPO2 ಸೇರಿದಂತೆ ವಿವಿಧ ಆರೋಗ್ಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಅಗತ್ಯವಿರುವವರಿಗೆ ಇಸಿಜಿ ಪರೀಕ್ಷೆಯ ಸೌಲಭ್ಯವೂ ಇರಲಿದೆ.
ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸುವ ಸಾರ್ವಜನಿಕರಿಗೆ ಆರೋಗ್ಯ ಸಂಬಂಧಿತ ಮಾರ್ಗದರ್ಶನ ಹಾಗೂ ಸಲಹೆಗಳನ್ನು ವೈದ್ಯರು ನೀಡಲಿದ್ದಾರೆ. ಆರಂಭಿಕ ಹಂತದಲ್ಲಿಯೇ ಆರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಪಡೆಯಲು ಇಂತಹ ಶಿಬಿರಗಳು ಸಹಕಾರಿಯಾಗಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.
ಸಾಮಾನ್ಯ ಆರೋಗ್ಯ ತಪಾಸಣೆಗೆ ₹100 ಶುಲ್ಕ ನಿಗದಿಪಡಿಸಲಾಗಿದ್ದು, ಅಗತ್ಯವಿದ್ದಲ್ಲಿ ಇಸಿಜಿ ಪರೀಕ್ಷೆಗೆ ₹200 ಶುಲ್ಕ ಇರಲಿದೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಪಿಸಿಎ ಟ್ರಸ್ಟ್ ಹಾಗೂ ನಂದನಾ ಕ್ಲಿನಿಕ್ ಮನವಿ ಮಾಡಿವೆ.
ಆರೋಗ್ಯವೇ ಭಾಗ್ಯ – ಆರೋಗ್ಯಕರ ಸಮಾಜಕ್ಕಾಗಿ ನಮ್ಮ ಕಾಳಜಿ ಎಂಬ ಸಂದೇಶದೊಂದಿಗೆ ಈ ಶಿಬಿರವನ್ನು ಆಯೋಜಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.