ಶನಿವಾರಸಂತೆಯಲ್ಲಿ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಭೆ
ಮಡಿಕೇರಿ, 13 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶನಿವಾರ ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ನಡೆಸಿ ಪಕ್ಷದ ಸಂಘಟನೆ ಬಲವರ್ಧನೆ, ಮುಂಬರುವ ರಾಜಕೀಯ ಚಟುವಟಿಕೆಗಳು ಹಾಗೂ ಜನಸಂಪರ್ಕ ಕಾರ್ಯಕ್ರಮಗಳ ಕುರಿತು ಚರ್ಚಿಸಿದ
Bjp meeting


ಮಡಿಕೇರಿ, 13 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶನಿವಾರ ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ನಡೆಸಿ ಪಕ್ಷದ ಸಂಘಟನೆ ಬಲವರ್ಧನೆ, ಮುಂಬರುವ ರಾಜಕೀಯ ಚಟುವಟಿಕೆಗಳು ಹಾಗೂ ಜನಸಂಪರ್ಕ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು.

ಸಭೆಯಲ್ಲಿ ಪಕ್ಷದ ವಿವಿಧ ಘಟಕಗಳ ಕಾರ್ಯಚಟುವಟಿಕೆಗಳ ಪರಿಶೀಲನೆ ನಡೆಸಿದ ವಿಜಯೇಂದ್ರ ಅವರು, ಕಾರ್ಯಕರ್ತರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಪಕ್ಷದ ನೆಲೆಯನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು. ಸಂಘಟನಾತ್ಮಕವಾಗಿ ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ಮಾಜಿ ಶಾಸಕ ಅಪ್ಪಚ್ಚು ರಂಜನ್, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಕಾಳಪ್ಪ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ. ಬಿ.ಸಿ. ನವೀನ್, ಪ್ರಮುಖರಾದ ರೀನಾ ಪ್ರಕಾಶ್ ಸೇರಿದಂತೆ ವಿಭಾಗ ಪ್ರಭಾರಿಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande