ಕಲಬುರಗಿ ಕಾಲೇಜು ಮೇಲ್ಛಾವಣಿ ಕುಸಿತ ; ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು, 13 ಜೂನ್ (ಹಿ.ಸ.) : ಆ್ಯಂಕರ್ : ಕಲಬುರಗಿ ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಮೇಲ್ಛಾವಣಿಯ ಸಿಮೆಂಟ್ ಪದರು ಕುಸಿದು ಐವರು ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆಗೆ ಸಂಬಂಧಿಸಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್
ಅಶೋಕ


ಬೆಂಗಳೂರು, 13 ಜೂನ್ (ಹಿ.ಸ.) :

ಆ್ಯಂಕರ್ : ಕಲಬುರಗಿ ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಮೇಲ್ಛಾವಣಿಯ ಸಿಮೆಂಟ್ ಪದರು ಕುಸಿದು ಐವರು ವಿದ್ಯಾರ್ಥಿನಿಯರು ಗಾಯಗೊಂಡಿರುವ ಘಟನೆಗೆ ಸಂಬಂಧಿಸಿ ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಹೇಳಿಕೆ ನೀಡಿರುವ ಅವರು, ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ನೇರವಾಗಿ ಟೀಕಿಸಿ, ಸಂವಿಧಾನ, ಪ್ರಜಾಪ್ರಭುತ್ವ ಮತ್ತು ರಾಜಕೀಯ ವಿಷಯಗಳ ಬಗ್ಗೆ ನಿರಂತರವಾಗಿ ಭಾಷಣ ಮಾಡುವವರಿಗೆ ತಮ್ಮದೇ ಜಿಲ್ಲೆಯ ಸರ್ಕಾರಿ ಕಾಲೇಜಿನ ಕಟ್ಟಡದ ದುಸ್ಥಿತಿ ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ತರಗತಿ ನಡೆಯುತ್ತಿದ್ದ ವೇಳೆ ಮೇಲ್ಛಾವಣಿಯ ಭಾಗ ಕುಸಿದು ಬಿದ್ದ ಪರಿಣಾಮ ವಿದ್ಯಾರ್ಥಿನಿಯರು ಗಾಯಗೊಂಡಿರುವುದು ಅತ್ಯಂತ ಗಂಭೀರ ವಿಷಯವಾಗಿದೆ. ಇದು ಕೇವಲ ಅಪಘಾತವಲ್ಲ, ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಮತ್ತು ಆಡಳಿತ ವೈಫಲ್ಯದ ಪರಿಣಾಮ ಎಂದು ಅಶೋಕ್ ಆರೋಪಿಸಿದ್ದಾರೆ.

ಸ್ವಂತ ಜಿಲ್ಲೆಯ ಕಾಲೇಜು ಕಟ್ಟಡಗಳು ಕಣ್ಣೆದುರೇ ಕುಸಿಯುತ್ತಿದ್ದರೂ ಸರ್ಕಾರ ಎಚ್ಚೆತ್ತುಕೊಳ್ಳುತ್ತಿಲ್ಲ. ವಿದ್ಯಾರ್ಥಿನಿಯರು ತರಗತಿಯಲ್ಲೇ ಗಾಯಗೊಂಡು ಆಸ್ಪತ್ರೆ ಸೇರುತ್ತಿದ್ದಾರೆ. ಆದರೆ ಸಚಿವರು ರಾಜಕೀಯ ಚರ್ಚೆಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲೇ ನಿರತರಾಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನೂ ಉದ್ದೇಶಿಸಿ ಮಾತನಾಡಿರುವ ಅಶೋಕ್, ಇದು ಕೇವಲ ಮೇಲ್ಛಾವಣಿ ಕುಸಿದ ಘಟನೆ ಅಲ್ಲ, ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯೇ ಕುಸಿದುಬಿದ್ದಿರುವುದರ ಸಂಕೇತ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಹಿನ್ನೆಲೆಯಲ್ಲಿ ಗಾಯಗೊಂಡ ವಿದ್ಯಾರ್ಥಿನಿಯರಿಗೆ ಉನ್ನತ ಮಟ್ಟದ ಉಚಿತ ಚಿಕಿತ್ಸೆ ನೀಡಬೇಕು, ನಿರ್ಲಕ್ಷ್ಯಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಹಾಗೂ ರಾಜ್ಯದ ಎಲ್ಲಾ ಸರ್ಕಾರಿ ಶಾಲೆ ಮತ್ತು ಕಾಲೇಜುಗಳ ಸುರಕ್ಷತಾ ಲೆಕ್ಕಪರಿಶೋಧನೆ (ಸೇಫ್ಟಿ ಆಡಿಟ್) ನಡೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯದ ಶಿಕ್ಷಣ ಸಂಸ್ಥೆಗಳ ಕಟ್ಟಡಗಳ ಸುರಕ್ಷತೆಯ ಬಗ್ಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮಕ್ಕಳ ಜೀವದೊಂದಿಗೆ ಚೆಲ್ಲಾಟವಾಡುತ್ತಿರುವ ಸರ್ಕಾರವನ್ನು ಜನರು ಕ್ಷಮಿಸುವುದಿಲ್ಲ ಎಂದು ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande