ಕುಡಿದ ಮತ್ತಿನಲ್ಲಿ ಲಾರಿ ಚಾಲಕನ ಅಜಾಗರೂಕ ಚಾಲನೆಗೆ ಇಬ್ಬರ ಬಲಿ
ಬಾಗಲಕೋಟೆ, 13 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಅಮಾಯಕ ಪ್ರಯಾಣಿಕರು ಮೃತಪಟ್ಟಿರುವ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಲಾರಿ ಚಲಾಯಿಸಿದ ಚಾಲಕನ ಬೇಜವಾಬ್ದಾರಿತನವೇ
ಅಪಘಾತ


ಬಾಗಲಕೋಟೆ, 13 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಸುನಗ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಅಮಾಯಕ ಪ್ರಯಾಣಿಕರು ಮೃತಪಟ್ಟಿರುವ ಘಟನೆ ನಡೆದಿದೆ.

ಕುಡಿದ ಮತ್ತಿನಲ್ಲಿ ಅತಿ ವೇಗ ಹಾಗೂ ನಿರ್ಲಕ್ಷ್ಯದಿಂದ ಲಾರಿ ಚಲಾಯಿಸಿದ ಚಾಲಕನ ಬೇಜವಾಬ್ದಾರಿತನವೇ ಅಪಘಾತಕ್ಕೆ ಕಾರಣವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯಪುರ ಕಡೆಯಿಂದ ಬಾಗಲಕೋಟೆ ಕಡೆಗೆ ತೆರಳುತ್ತಿದ್ದ ಲಾರಿ ಚಾಲಕ, ಮದ್ಯದ ಅಮಲಿನಲ್ಲಿ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಈ ವೇಳೆ ಎದುರಿನಿಂದ ವಿಜಯಪುರದತ್ತ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಬಲಭಾಗದ ಹಿಂಬದಿಗೆ ಲಾರಿ ರಭಸವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್ನಲ್ಲಿದ್ದ ಪ್ರಯಾಣಿಕರು ಆತಂಕಕ್ಕೊಳಗಾಗಿದ್ದು, ಘಟನಾ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಬಾಗಲಕೋಟೆ ತಾಲೂಕಿನ ಸೀಮಿಕೇರಿ ಗ್ರಾಮದ ನಿವಾಸಿ ವಾಣಿ ದೇಸಾಯಿ (26) ಹಾಗೂ ಗದಗ ಜಿಲ್ಲೆಯ ನರಗುಂದದ ಯುವಕ ಶಿವಕುಮಾರ್ ಕಡ್ಲಿವಾಡ (25) ಎಂದು ಗುರುತಿಸಲಾಗಿದೆ.

ಅಪಘಾತದ ಸುದ್ದಿ ತಿಳಿದ ಕೂಡಲೇ ಬೀಳಗಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿ, ಪ್ರಕರಣದ ಕುರಿತು ಮಾಹಿತಿ ಸಂಗ್ರಹಿಸಿದರು. ಮದ್ಯದ ಮತ್ತಿನಲ್ಲಿ ವಾಹನ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.

ಸಾರ್ವಜನಿಕರು ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದು, ಇಂತಹ ಅಪಘಾತಗಳು ಮರುಕಳಿಸದಂತೆ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಪಾಲನೆ ಅಗತ್ಯವಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande