ರಸಗೊಬ್ಬರ ಕೊರತೆ ; ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ
ಬೆಂಗಳೂರು, 13 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಮುಂಗಾರು ಹಂಗಾಮು ಆರಂಭವಾಗಿ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುತ್ತಿರುವ ಸಂದರ್ಭದಲ್ಲಿ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ಪೂರೈಕೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿ
Byv


ಬೆಂಗಳೂರು, 13 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಮುಂಗಾರು ಹಂಗಾಮು ಆರಂಭವಾಗಿ ಕೃಷಿ ಚಟುವಟಿಕೆಗಳು ಚುರುಕುಗೊಳ್ಳುತ್ತಿರುವ ಸಂದರ್ಭದಲ್ಲಿ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ಪೂರೈಕೆ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರದ ನಿಷ್ಕ್ರಿಯತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಟೀಕಿಸಿದ್ದಾರೆ.

ಕೃಷಿ ಇಲಾಖೆ ಅಧಿಕಾರಿಗಳು ಕಾಗದದ ಮೇಲೆ 10.65 ಲಕ್ಷ ಟನ್ ರಸಗೊಬ್ಬರ ದಾಸ್ತಾನು ಇದೆ ಎಂದು ಹೇಳುತ್ತಿದ್ದರೂ, ಉತ್ತರ ಕರ್ನಾಟಕದ ಕೊಪ್ಪಳ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಹಾಗೂ ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳ ರೈತ ಸಂಪರ್ಕ ಕೇಂದ್ರಗಳ ಮುಂದೆ “ಗೊಬ್ಬರ ದಾಸ್ತಾನಿಲ್ಲ” ಎಂಬ ಫಲಕಗಳು ಕಾಣಿಸುತ್ತಿವೆ ಎಂದು ಹೇಳಿದ್ದಾರೆ.

ರೈತರು ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತರೂ ಎಕರೆಗೆ ಕೇವಲ ಒಂದು ಚೀಲ ಗೊಬ್ಬರ ಮಾತ್ರ ನೀಡಲಾಗುತ್ತಿದೆ. ಇದು ಅನ್ನದಾತರಿಗೆ ಸರ್ಕಾರ ಮಾಡುತ್ತಿರುವ ಘೋರ ಅಪಮಾನವಾಗಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಲಾಖೆಗಳ ನಡುವಿನ ಸಮನ್ವಯದ ಕೊರತೆ ಹಾಗೂ ಕೃಷಿ ಸಚಿವರ ಬೇಜವಾಬ್ದಾರಿತನದಿಂದ ರಾಜ್ಯದಲ್ಲಿ ಗೊಬ್ಬರದ ಕೃತಕ ಅಭಾವ ಸೃಷ್ಟಿಯಾಗಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರದ ದಾಖಲೆಗಳಲ್ಲಿ ಉಲ್ಲೇಖಿಸಿರುವ 10.65 ಲಕ್ಷ ಟನ್ ರಸಗೊಬ್ಬರ ದಾಸ್ತಾನು ಎಲ್ಲಿದೆ ಎಂಬುದನ್ನು ಕಾಂಗ್ರೆಸ್ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಬೇಡಿಕೆಗೆ ಅನುಗುಣವಾಗಿ ಎಲ್ಲಾ ಜಿಲ್ಲೆಗಳಿಗೆ ಸಮರ್ಪಕ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ ಮಾಡುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande