ಯುವಶಕ್ತಿ ಭಾರತದ ಭವಿಷ್ಯಕ್ಕೆ ಹೊಸ ದಿಕ್ಕು ನೀಡುತ್ತಿದೆ : ಪ್ರಧಾನಿ ಮೋದಿ
ನವದೆಹಲಿ, 13 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆಗಳ ಹಿನ್ನೆಲೆಯಲ್ಲಿ ದೇಶದ ಯುವಜನರ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ, ಉತ್ಪಾದನಾ ಕ್ಷೇತ್ರ, ಬಾಹ್ಯಾಕಾಶ, ಸೆಮಿಕಂಡಕ್ಟರ್ ಹಾಗೂ ಡ್ರೋನ್ ತಂತ್ರಜ್ಞಾನ ಸೇರಿದಂತೆ
Pm


ನವದೆಹಲಿ, 13 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ಸರ್ಕಾರದ 12 ವರ್ಷಗಳ ಸಾಧನೆಗಳ ಹಿನ್ನೆಲೆಯಲ್ಲಿ ದೇಶದ ಯುವಜನರ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ, ಉತ್ಪಾದನಾ ಕ್ಷೇತ್ರ, ಬಾಹ್ಯಾಕಾಶ, ಸೆಮಿಕಂಡಕ್ಟರ್ ಹಾಗೂ ಡ್ರೋನ್ ತಂತ್ರಜ್ಞಾನ ಸೇರಿದಂತೆ ವಿವಿಧ ವಲಯಗಳಲ್ಲಿ ಭಾರತೀಯ ಯುವಕರು ತಮ್ಮ ಪ್ರತಿಭೆಯನ್ನು ಸಾಬೀತುಪಡಿಸುತ್ತಿದ್ದು, ದೇಶದ ಹಾಗೂ ವಿಶ್ವದ ಭವಿಷ್ಯ ರೂಪಿಸುವ ಪ್ರಮುಖ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಶನಿವಾರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸಂದೇಶ ಹಂಚಿಕೊಂಡ ಪ್ರಧಾನಿ ಮೋದಿ, ಭಾರತದ ಯುವಕರು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ದೇಶಕ್ಕೆ ಹೆಮ್ಮೆ ತಂದಿರುವುದು ಸಂತಸದ ವಿಷಯ ಎಂದು ಹೇಳಿದ್ದಾರೆ.

ನವೋದ್ಯಮ ಮತ್ತು ತಂತ್ರಜ್ಞಾನ ಆಧಾರಿತ ಕ್ಷೇತ್ರಗಳಲ್ಲಿ ಯುವಕರು ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದು, ಅವರ ಸಾಧನೆಗಳು ‘ವಿಕಸಿತ ಭಾರತ’ ನಿರ್ಮಾಣಕ್ಕೆ ಬಲಿಷ್ಠ ಅಡಿಪಾಯವಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.

ಕ್ರೀಡಾ ಕ್ಷೇತ್ರದಲ್ಲೂ ಭಾರತೀಯ ಯುವಕರ ಸಾಧನೆಯನ್ನು ಪ್ರಧಾನಿ ವಿಶೇಷವಾಗಿ ಪ್ರಶಂಸಿಸಿದರು. ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ದೇಶದ ಗೌರವವನ್ನು ಹೆಚ್ಚಿಸಿದ್ದಾರೆ. ಅವರ ಸಾಧನೆಗಳಿಂದ ಜಾಗತಿಕ ವೇದಿಕೆಯಲ್ಲಿ ಭಾರತದ ಪ್ರತಿಷ್ಠೆ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಕ್ರೀಡೆಗಳಿಗೆ ಅನುಕೂಲಕರ ವಾತಾವರಣ, ಆಧುನಿಕ ಮೂಲಸೌಕರ್ಯ ಹಾಗೂ ಕ್ರೀಡಾಪಟುಗಳಿಗೆ ಹೆಚ್ಚುತ್ತಿರುವ ಬೆಂಬಲದಿಂದ ಯುವಕರಿಗೆ ಹೊಸ ಅವಕಾಶಗಳು ಸೃಷ್ಟಿಯಾಗುತ್ತಿವೆ ಎಂದು ಪ್ರಧಾನಿ ತಿಳಿಸಿದರು. ಇದರಿಂದ ಹೆಚ್ಚಿನ ಯುವಕರು ಕ್ರೀಡೆಯನ್ನು ವೃತ್ತಿಯಾಗಿ ಆಯ್ಕೆ ಮಾಡಿಕೊಳ್ಳಲು ಪ್ರೇರೇಪಿತರಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ವರ್ಷಗಳಲ್ಲಿ ಭಾರತದ ಯುವಶಕ್ತಿಯೇ ದೇಶವನ್ನು ಹೊಸ ಎತ್ತರಗಳಿಗೆ ಕೊಂಡೊಯ್ಯುವ ಪ್ರಮುಖ ಶಕ್ತಿಯಾಗಲಿದೆ ಎಂಬ ವಿಶ್ವಾಸವನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದರು. ಯುವಕರ ಪ್ರತಿಭೆ, ನವೀನ ಚಿಂತನೆ ಹಾಗೂ ಪರಿಶ್ರಮವು ಆತ್ಮನಿರ್ಭರ ಮತ್ತು ಅಭಿವೃದ್ಧಿ ಹೊಂದಿದ ಭಾರತದ ನಿರ್ಮಾಣದಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಅವರು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande