ಪ್ರಧಾನಿ ಮೋದಿ ಫ್ರಾನ್ಸ್ ಹಾಗೂ ಸ್ಲೋವಾಕಿಯಾ ಪ್ರವಾಸಕ್ಕೆ
ನವದೆಹಲಿ, 13 ಜೂನ್ (ಹಿ.ಸ.) : ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ಕೆಲವು ದಿನಗಳಲ್ಲಿ ಫ್ರಾನ್ಸ್ ಮತ್ತು ಸ್ಲೋವಾಕಿಯಾ ದೇಶಗಳಿಗೆ ಭೇಟಿ ನೀಡಲಿದ್ದು, ದ್ವಿಪಕ್ಷೀಯ ಮಾತುಕತೆಗಳು, ಬಹುಪಕ್ಷೀಯ ಕಾರ್ಯಕ್ರಮಗಳು ಹಾಗೂ ಭಾರತೀಯ ಮೂಲದ ಸಮುದಾಯದ ಸದಸ್ಯರೊಂದಿಗೆ ಸಂವಾದ ಸೇರಿದಂತೆ ವಿವಿಧ
Pm


ನವದೆಹಲಿ, 13 ಜೂನ್ (ಹಿ.ಸ.) :

ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ಕೆಲವು ದಿನಗಳಲ್ಲಿ ಫ್ರಾನ್ಸ್ ಮತ್ತು ಸ್ಲೋವಾಕಿಯಾ ದೇಶಗಳಿಗೆ ಭೇಟಿ ನೀಡಲಿದ್ದು, ದ್ವಿಪಕ್ಷೀಯ ಮಾತುಕತೆಗಳು, ಬಹುಪಕ್ಷೀಯ ಕಾರ್ಯಕ್ರಮಗಳು ಹಾಗೂ ಭಾರತೀಯ ಮೂಲದ ಸಮುದಾಯದ ಸದಸ್ಯರೊಂದಿಗೆ ಸಂವಾದ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಈ ಪ್ರವಾಸದ ವೇಳೆ ಆರ್ಥಿಕ, ವ್ಯಾಪಾರ, ತಂತ್ರಜ್ಞಾನ ಹಾಗೂ ಸಾಂಸ್ಕೃತಿಕ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಕುರಿತು ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದ್ದಾರೆ.

ಪ್ರವಾಸವು ಫ್ರಾನ್ಸ್ನ ನೈಸ್ ನಗರದಲ್ಲಿ ಆರಂಭವಾಗಲಿದ್ದು, ಅಲ್ಲಿ ನಡೆಯಲಿರುವ ‘ಭಾರತ್ ಇನ್ನೋವೇಟ್ಸ್’ ಕಾರ್ಯಕ್ರಮದಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾಗವಹಿಸಲಿದ್ದಾರೆ.

ಭಾರತ ಮತ್ತು ಫ್ರಾನ್ಸ್ ದೇಶಗಳು ‘ಭಾರತ–ಫ್ರಾನ್ಸ್ ನಾವೀನ್ಯತೆಯ ವರ್ಷ’ವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ, ಈ ಕಾರ್ಯಕ್ರಮವು ನವೋದ್ಯಮಿಗಳು, ಸಂಶೋಧಕರು, ತಂತ್ರಜ್ಞಾನ ತಜ್ಞರು ಹಾಗೂ ನಾವೀನ್ಯತೆ ಕ್ಷೇತ್ರದ ಪ್ರಮುಖರನ್ನು ಒಂದೇ ವೇದಿಕೆಗೆ ತರಲಿದೆ.

‘ಭಾರತ್ ಇನ್ನೋವೇಟ್ಸ್’ ಕಾರ್ಯಕ್ರಮವು ಹೊಸ ಆಲೋಚನೆಗಳು, ತಾಂತ್ರಿಕ ಸಾಧನೆಗಳು ಮತ್ತು ಉದ್ಯಮಶೀಲತೆಯ ಸಾಮರ್ಥ್ಯವನ್ನು ಜಾಗತಿಕ ಮಟ್ಟದಲ್ಲಿ ಪ್ರದರ್ಶಿಸುವ ಮಹತ್ವದ ವೇದಿಕೆಯಾಗಿದ್ದು, ಉಭಯ ದೇಶಗಳ ನಡುವಿನ ನಾವೀನ್ಯತೆ ಸಹಕಾರಕ್ಕೆ ಹೊಸ ದಿಕ್ಕು ನೀಡಲಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ನೈಸ್ನಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪ್ರಧಾನಿ ಮೋದಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಭಾರತ–ಫ್ರಾನ್ಸ್ ವಿಶೇಷ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವದ ವಿವಿಧ ಆಯಾಮಗಳನ್ನು ಪರಿಶೀಲಿಸಿ, ರಕ್ಷಣಾ, ತಂತ್ರಜ್ಞಾನ, ಹೂಡಿಕೆ, ಹಸಿರು ಇಂಧನ, ಶಿಕ್ಷಣ ಹಾಗೂ ಸಾಂಸ್ಕೃತಿಕ ವಿನಿಮಯ ಸೇರಿದಂತೆ ಹಲವು ಕ್ಷೇತ್ರಗಳ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಕುರಿತು ಚರ್ಚೆ ನಡೆಯಲಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande