
ಹಾವೇರಿ, 13 ಜೂನ್ (ಹಿ.ಸ.) :
ಆ್ಯಂಕರ್ : ಅಸ್ಸಾಂ ರಾಜ್ಯದ ಜೋರ್ಹತ್ ವಾಯುನೆಲೆಯಲ್ಲಿ ಭಾರತೀಯ ವಾಯುಪಡೆಯ ವಿಮಾನ ಲ್ಯಾಂಡಿಂಗ್ ವೇಳೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಅಗ್ನಿವೀರರು ಸೇರಿದಂತೆ ಐವರು ವಾಯುಪಡೆ ಸಿಬ್ಬಂದಿ ಮೃತಪಟ್ಟಿರುವ ಘಟನೆಗೆ ಶಾಸಕ ಶ್ರೀನಿವಾಸ್ ಮಾನೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶದ ರಕ್ಷಣೆಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ವೀರ ಯೋಧರ ಅಗಲಿಕೆ ಅತ್ಯಂತ ದುಃಖಕರ ಸಂಗತಿಯಾಗಿದೆ ಎಂದು ಹೇಳಿದ್ದಾರೆ.
ದುರಂತದಲ್ಲಿ ಮೃತಪಟ್ಟಿರುವ ಸ್ಕ್ವಾಡ್ರನ್ ಲೀಡರ್ ಪ್ರಶಾಂತ್ ಸಿಂಗ್, ಫ್ಲೈಟ್ ಲೆಫ್ಟಿನೆಂಟ್ ಶುಭಂ ಕುಮಾರ್, ಸರ್ಜೆಂಟ್ ಜಿತೇಂದ್ರ ಶರ್ಮಾ ಹಾಗೂ ಅಗ್ನಿವೀರ್ ವಾಯುಗಳಾದ ಖೇಮರಾಮ್ ಕುಮಾವತ್ ಮತ್ತು ದ್ಯಾನಿಶ್ ಆಲಂ ಅವರಿಗೆ ಗೌರವಪೂರ್ವಕ ಶ್ರದ್ಧಾಂಜಲಿ ಸಲ್ಲಿಸಿರುವ ಶಾಸಕರು, ಅವರ ಕುಟುಂಬ ಸದಸ್ಯರ ದುಃಖದಲ್ಲಿ ತಾವು ಸಹ ಭಾಗಿಯಾಗಿದ್ದಾಗಿ ತಿಳಿಸಿದ್ದಾರೆ.
ಅದೇ ವೇಳೆ, ಅಪಘಾತದಲ್ಲಿ ಪವಾಡಸದೃಶವಾಗಿ ಬದುಕುಳಿದಿರುವ ವಾಯುಪಡೆಯ ಸಹ ಪೈಲಟ್ ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ದೇಶದ ಭದ್ರತೆ ಮತ್ತು ಸಾರ್ವಭೌಮತ್ವಕ್ಕಾಗಿ ಸೇವೆ ಸಲ್ಲಿಸಿದ ಈ ವೀರ ಯೋಧರ ತ್ಯಾಗ ಸದಾ ಸ್ಮರಣೀಯವಾಗಿರಲಿದೆ ಎಂದು ಶಾಸಕ ಶ್ರೀನಿವಾಸ್ ಮಾನೆ ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.