
ಬಳ್ಳಾರಿ, 13 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಪರಿಶಿಷ್ಟ ಜಾತಿ ಜನಾಂಗದವರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರ ಅಧ್ಯಕ್ಷತೆಯಲ್ಲಿ ಜೂ.18 ರಂದು ಬೆಳಿಗ್ಗೆ 11 ಗಂಟೆಗೆ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕುಂದು-ಕೊರತೆ ಆಲಿಕೆ ಸಭೆ ಆಯೋಜಿಸಲಾಗಿದೆ.
ಸಮಸ್ಯೆಗಳಿರುವ ಪರಿಶಿಷ್ಟ ಜಾತಿಯ ವಿವಿಧ ಸಂಘ- ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ಸದಸ್ಯರು, ದಲಿತ ಮುಖಂಡರು ಹಾಗೂ ಸಮುದಾಯದ ಜನರು ಅಂದು ನಡೆಯುವ ಕುಂದು-ಕೊರತೆ ಆಲಿಕೆ ಸಭೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್