ಅಂಗನವಾಡಿ ಕೇಂದ್ರಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ; ಆಕ್ಷೇಪಣೆಗೆ ಅಹ್ವಾನ
ಶಿವಮೊಗ್ಗ, 13 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ 16 ಹುದ್ದೆಗೆ ಹಾಗೂ 93 ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜ
ಅಂಗನವಾಡಿ ಕೇಂದ್ರಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ; ಆಕ್ಷೇಪಣೆಗೆ ಅಹ್ವಾನ


ಶಿವಮೊಗ್ಗ, 13 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ 16 ಹುದ್ದೆಗೆ ಹಾಗೂ 93 ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಸಂಬಂಧಿಸಿದ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ.

ಈ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಜೂ. 20 ರೊಳಗಾಗಿ ಸಲ್ಲಿಸುವಂತೆ ಹಾಗೂ ಆಯ್ಕೆಯಾದ ಅಭ್ಯರ್ಥಿಗಳು ಜೂ. 23 ರಂದು ಬೆಳಗ್ಗೆ 10.00ಕ್ಕೆ ದಾಖಲಾತಿಗಳ ಪರಿಶೀಲನೆಗೆ ಅರ್ಜಿಯೊಂದಿಗೆ ಸಲ್ಲಿಸಿದ್ದ ಮೂಲ ದಾಖಲೆಗಳೊಂದಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಹಾಜರಾಗುವಂತೆ ಶಿವಮೊಗ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande