ಬಿಟಿಡಿಎ ಸಿಬ್ಬಂದಿ ಮೇಲೆ ಹಲ್ಲೆ ಖಂಡನೀಯ ; ಆರೋಪಿ ಬಸಪ್ಪ ದೊಡ್ಡಮನಿ ಬಂಧನಕ್ಕೆ ಪ್ರಕಾಶ ತಪಶೆಟ್ಟಿ ಆಗ್ರಹ
ಬಾಗಲಕೋಟೆ, 15 ಜೂನ್ (ಹಿ.ಸ.) : ಆಂಕರ್ : ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಸಿಬ್ಬಂದಿ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ತೀವ್ರವಾಗಿ ಖಂಡಿಸಿದ್ದು, ಹಲ್ಲೆ ಮಾಡಿದ ಆರೋಪಿಯಾಗಿರುವ ಬಸಪ್ಪ ದೊಡ್ಡಮನಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈ
Demand


ಬಾಗಲಕೋಟೆ, 15 ಜೂನ್ (ಹಿ.ಸ.) :

ಆಂಕರ್ : ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ (ಬಿಟಿಡಿಎ) ಸಿಬ್ಬಂದಿ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ತಪಶೆಟ್ಟಿ ತೀವ್ರವಾಗಿ ಖಂಡಿಸಿದ್ದು, ಹಲ್ಲೆ ಮಾಡಿದ ಆರೋಪಿಯಾಗಿರುವ ಬಸಪ್ಪ ದೊಡ್ಡಮನಿಯನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಬಿಟಿಡಿಎ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ಸರ್ಕಾರಿ ನೌಕರರ ಸುರಕ್ಷತೆ ಕುರಿತು ಆತಂಕ ಮೂಡಿಸಿದೆ. ಸಾರ್ವಜನಿಕ ಸೇವೆ ಸಲ್ಲಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕರ್ತವ್ಯ ನಿರ್ವಹಿಸಲು ಮುಕ್ತ ಹಾಗೂ ಭದ್ರ ವಾತಾವರಣ ಕಲ್ಪಿಸುವುದು ಅಗತ್ಯವಾಗಿದೆ ಎಂದು ಪ್ರಕಾಶ ತಪಶೆಟ್ಟಿ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅವರು, “ಸರ್ಕಾರಿ ಕಚೇರಿಯಲ್ಲಿ ಕರ್ತವ್ಯದಲ್ಲಿರುವ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸುವುದು ಯಾವುದೇ ಕಾರಣಕ್ಕೂ ಸಹಿಸುವಂತದ್ದಲ್ಲ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿಯನ್ನು ತಕ್ಷಣ ಬಂಧಿಸಿ, ನ್ಯಾಯಾಂಗ ಕ್ರಮಕ್ಕೆ ಒಳಪಡಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಬಿಟಿಡಿಎ ಕಚೇರಿಗೆ ಬರುವ ಸಾರ್ವಜನಿಕರ ಸಮಸ್ಯೆಗಳನ್ನು ನಿಯಮಾನುಸಾರ ಪರಿಹರಿಸಲು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಕೆಲವರು ಕಾನೂನು ಕೈಗೆ ತೆಗೆದುಕೊಂಡು ಸಿಬ್ಬಂದಿಯ ಮೇಲೆ ದೌರ್ಜನ್ಯ ನಡೆಸುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಘಟನೆ ಸಂಬಂಧ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವ ಹಾಗೂ ಹಲ್ಲೆ ನಡೆಸುವಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಅಗತ್ಯವಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿಯಾಗಿರುವ ಬಸಪ್ಪ ದೊಡ್ಡಮನಿ ಬಂಧನವಾಗುವವರೆಗೆ ಹೋರಾಟ ಮುಂದುವರಿಸುವುದಾಗಿ ಸರ್ಕಾರಿ ನೌಕರರ ಸಂಘದ ಮುಖಂಡರು ಕೂಡ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ಅಧಿಕಾರಿಗಳು ಹಾಗೂ ಸಿಬ್ಬಂದಿಯ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande