
ನವದೆಹಲಿ, 15 ಜೂನ್ (ಹಿ.ಸ.) :
ಆ್ಯಂಕರ್ : ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ತಿಳುವಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದ ಸಂಘರ್ಷವು ಜಾಗತಿಕ ಮಟ್ಟದಲ್ಲಿ ಗಂಭೀರ ಆರ್ಥಿಕ ಅಡ್ಡಿ ಉಂಟುಮಾಡಿದ್ದು, ಅನೇಕ ದೇಶಗಳಲ್ಲಿ ಜೀವಹಾನಿಗೂ ಕಾರಣವಾಗಿದೆ ಎಂದು ಹೇಳಿದ್ದಾರೆ.
ಅಮೆರಿಕ ಮತ್ತು ಇರಾನ್ ನಡುವಿನ ಈ ತಿಳುವಳಿಕೆಯ ಅನುಷ್ಠಾನವು ಪ್ರದೇಶದಲ್ಲಿ ಶಾಂತಿ ಹಾಗೂ ಸ್ಥಿರತೆಯನ್ನು ಪುನಃಸ್ಥಾಪಿಸಲು ನೆರವಾಗಲಿದೆ. ಜೊತೆಗೆ ಅಂತರರಾಷ್ಟ್ರೀಯ ಸಂಚರಣೆ ಮತ್ತು ವಾಣಿಜ್ಯದ ಸ್ವಾತಂತ್ರ್ಯವನ್ನು ಖಚಿತಪಡಿಸಲು ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಭಾರತ ಹೊಂದಿದೆ ಎಂದು ಅವರು ತಿಳಿಸಿದ್ದಾರೆ.
ಉಳಿದಿರುವ ವಿಷಯಗಳ ಕುರಿತು ಮಾತುಕತೆಗಳು ಯಶಸ್ವಿಯಾಗಿ ಮುಂದುವರಿದು, ದೀರ್ಘಕಾಲಿಕ ಹಾಗೂ ಸುಸ್ಥಿರ ಅಂತಿಮ ಒಪ್ಪಂದಕ್ಕೆ ಉಭಯ ದೇಶಗಳು ತಲುಪಲಿವೆ ಎಂಬ ನಿರೀಕ್ಷೆಯನ್ನು ಭಾರತ ವ್ಯಕ್ತಪಡಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಸ್ಥಿರತೆ ಮತ್ತು ಆರ್ಥಿಕ ಚಟುವಟಿಕೆಗಳ ಸಾಮಾನ್ಯ ಸ್ಥಿತಿಯ ಪುನಃಸ್ಥಾಪನೆ ಜಾಗತಿಕ ಹಿತಾಸಕ್ತಿಗೆ ಅತ್ಯಂತ ಅಗತ್ಯವಾಗಿದೆ ಎಂದು ಅವರು ತಮ್ಮ ಸಂದೇಶದಲ್ಲಿ ಒತ್ತಿ ಹೇಳಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.