ಬಳ್ಳಾರಿ : ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’
ಬಳ್ಳಾರಿ, 19 ಜೂನ್ (ಹಿ.ಸ.) : ಆ್ಯಂಕರ್ : ಯೋಗ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಯೋಗದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಶುಕ್ರವಾರ ನಗರದಲ್ಲಿ ಬೃಹತ್ ‘ನಡಿಗೆ ಜಾಥಾ’ (ವಾಕಥಾನ್) ಹಮ್ಮಿಕೊಳ್ಳಲಾಗಿತ್ತು. ಜಾಥಾಕ್ಕೆ ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಆಯುಷ್
Bellary: 'Walking Jatha' for Yoga Awareness


Bellary: 'Walking Jatha' for Yoga Awareness


Bellary: 'Walking Jatha' for Yoga Awareness


ಬಳ್ಳಾರಿ, 19 ಜೂನ್ (ಹಿ.ಸ.) :

ಆ್ಯಂಕರ್ : ಯೋಗ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಯೋಗದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಶುಕ್ರವಾರ ನಗರದಲ್ಲಿ ಬೃಹತ್ ‘ನಡಿಗೆ ಜಾಥಾ’ (ವಾಕಥಾನ್) ಹಮ್ಮಿಕೊಳ್ಳಲಾಗಿತ್ತು.

ಜಾಥಾಕ್ಕೆ ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಟಿ. ಫಣೇಂದರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ.

ಬಳಿಕ ಮಾತನಾಡಿದ ಅವರು, ಯೋಗದಿಂದ ದೇಹಕ್ಕೆ ಮತ್ತು ಮನಸ್ಸಿಗೆ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಸಕ್ಕರೆ ಕಾಯಿಲೆ (ಡಯಾಬಿಟಿಸ್) ಮತ್ತು ರಕ್ತದೊತ್ತಡದ (ಬಿಪಿ) ದಂತಹ ಸಮಸ್ಯೆಗಳನ್ನು ನಿಯಂತ್ರಿಸಲು ಯೋಗ ಅತ್ಯುತ್ತಮ ಮಾರ್ಗವಾಗಿದೆ. ಆರೋಗ್ಯಕರ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಜೂ.21 ರಂದು ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.

ಜಾಥಾವು ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಪ್ರಾರಂಭಗೊಂಡು ಸಂಗಂ ವೃತ್ತ, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಅಂತ್ಯಗೊಂಡಿತು.

ಜಾಥಾದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯೋಗ ಪಟುಗಳು, ಸಾರ್ವಜನಿಕರು ಹಾಗೂ ಹಿರಿಯ ನಾಗರಿಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ‘ಆರೋಗ್ಯವೇ ಭಾಗ್ಯ’, ‘ದಿನವೂ ಮಾಡಿ ಯೋಗ, ದೂರವಿಡಿ ರೋಗ’ ಎಂಬ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಸಾರ್ವಜನಿಕರ ಗಮನ ಸೆಳೆಯಲಾಯಿತು.

ಈ ವೇಳೆ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande