ಹರಿಪ್ರಸಾದ್, ವಿನಯ್ ಕಾರ್ತಿಕ್ ಸಿದ್ದರಾಮಯ್ಯ ಭೇಟಿ
ಬೆಂಗಳೂರು, 19 ಜೂನ್ (ಹಿ.ಸ.) : ಆ್ಯಂಕರ್ : ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ನಿನ್ನೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ವಿನಯ್ ಕಾರ್ತಿಕ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು. ಈ ಸಂದರ್
Bkh


ಬೆಂಗಳೂರು, 19 ಜೂನ್ (ಹಿ.ಸ.) :

ಆ್ಯಂಕರ್ : ವಿಧಾನ ಸಭೆಯಿಂದ ವಿಧಾನ ಪರಿಷತ್ತಿಗೆ ನಿನ್ನೆ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ವಿನಯ್ ಕಾರ್ತಿಕ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಇಬ್ಬರು ನಾಯಕರಿಗೂ ಅಭಿನಂದನೆ ಸಲ್ಲಿಸಿ, ವಿಧಾನ ಪರಿಷತ್ ಸದಸ್ಯರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸುವಂತೆ ಶುಭ ಹಾರೈಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದ ಬಿ.ಕೆ. ಹರಿಪ್ರಸಾದ್ ಹಾಗೂ ವಿನಯ್ ಕಾರ್ತಿಕ್ ಅವರು ಜಯಗಳಿಸಿದ್ದು, ಪಕ್ಷದ ನಾಯಕತ್ವದ ವಿಶ್ವಾಸವನ್ನು ಉಳಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅವರು, ಪಕ್ಷದ ಬೆಂಬಲ ಮತ್ತು ಸಹಕಾರಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande