


ಬಳ್ಳಾರಿ, 19 ಜೂನ್ (ಹಿ.ಸ.) :
ಆ್ಯಂಕರ್ : ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಗಳಲ್ಲಿ ಇರುವ ಫಲವತ್ತಾದ ಕೃಷಿಭೂಮಿಯನ್ನು ರೈತರಿಂದ ಬಲವಂತವಾಗಿ ಸ್ವಾಧೀನ ಮಾಡಿಕೊಳ್ಳುತ್ತಿರುವ ಕರ್ನಾಟಕ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಜೆಡಿಎಸ್ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದೆ.
ಜಿಲ್ಲಾ ಜೆಡಿಎಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಸಭೆ ಸೇರಿದ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಕರ್ನಾಟಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು, ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಗಳ ವ್ಯಾಪ್ತಿಯಲ್ಲಿನ ಫಲವತ್ತಾದ ಕೃಷಿ ಭೂಮಿಯನ್ನು ಸರ್ಕಾರ ರೈತರಿಂದ ಒತ್ತಾಯಪೂರ್ವಕವಾಗಿ ವಶಕ್ಕೆ ತೆಗೆದುಕೊಳ್ಳುತ್ತಿರುವುದು ಸರ್ಕಾರದ ಮತ್ತು ಕಾಂಗ್ರೆಸ್ನ ರೈತ ವಿರೋಧಿ ನೀತಿಗೆ ಸಾಕ್ಷಿ ಎಂದರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್