ತೆಗ್ಗೇಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ವಿಜಯಪುರ, 19 ಜೂನ್ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ತೆಗ್ಗೇಹಳ್ಳಿ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಹಾಗೂ ನೂರಾರು ಮಹಿಳೆಯರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಇಂಡಿ ತಾಲೂಕು ಜೆಡಿಎಸ್ ಅಧ್ಯಕ್ಷರಾದ ಬಿ.
Water


ವಿಜಯಪುರ, 19 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ಇಂಡಿ ಮತಕ್ಷೇತ್ರದ ತೆಗ್ಗೇಹಳ್ಳಿ ಗ್ರಾಮದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ, ಗ್ರಾಮಸ್ಥರು ಹಾಗೂ ನೂರಾರು ಮಹಿಳೆಯರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಇಂಡಿ ತಾಲೂಕು ಜೆಡಿಎಸ್ ಅಧ್ಯಕ್ಷರಾದ ಬಿ.ಡಿ. ಪಾಟೀಲ ಅವರ ನೇತೃತ್ವದಲ್ಲಿ ಇಂಡಿ ತಹಸೀಲ್ದಾರ್ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ, ಗ್ರಾಮಕ್ಕೆ ತಕ್ಷಣ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಒತ್ತಾಯಿಸಲಾಯಿತು.

ಬೇಸಿಗೆಯ ತೀವ್ರತೆಯ ನಡುವೆ ತೆಗ್ಗೇಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರು ಪ್ರತಿದಿನ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ದೂರದ ಪ್ರದೇಶಗಳಿಗೆ ತೆರಳಿ ನೀರು ತರುವ ಅನಿವಾರ್ಯತೆ ಎದುರಾಗಿದ್ದು, ವಿಶೇಷವಾಗಿ ಮಹಿಳೆಯರು ಹೆಚ್ಚಿನ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಜೆಡಿಎಸ್ ತಾಲೂಕು ಅಧ್ಯಕ್ಷ ಶ್ರೀ ಬಿ.ಡಿ. ಪಾಟೀಲ ಅವರು, “ಗ್ರಾಮದ ಜನರಿಗೆ ಮೂಲಭೂತ ಸೌಲಭ್ಯವಾದ ಕುಡಿಯುವ ನೀರು ಒದಗಿಸುವುದು ಆಡಳಿತದ ಮೊದಲ ಆದ್ಯತೆಯಾಗಬೇಕು. ಹಲವು ದಿನಗಳಿಂದ ನೀರಿನ ಸಮಸ್ಯೆ ಇದ್ದರೂ ಸೂಕ್ತ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿ. ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಹಿಳೆಯರು ಹಾಗೂ ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು. ನೀರಿನ ಕೊರತೆಯಿಂದ ಮಕ್ಕಳ ಶಿಕ್ಷಣ, ಗೃಹ ಕೆಲಸ ಹಾಗೂ ದೈನಂದಿನ ಜೀವನದ ಮೇಲೆ ಪರಿಣಾಮ ಬೀರುತ್ತಿದೆ ಎಂದು ಅಳಲು ತೋಡಿಕೊಂಡರು. ಗ್ರಾಮಕ್ಕೆ ಟ್ಯಾಂಕರ್ ಮೂಲಕವಾದರೂ ತಕ್ಷಣ ನೀರು ಪೂರೈಸಬೇಕು ಹಾಗೂ ಮುಂದಿನ ದಿನಗಳಲ್ಲಿ ಶಾಶ್ವತ ಕುಡಿಯುವ ನೀರಿನ ಯೋಜನೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ಬಳಿಕ ಗ್ರಾಮಸ್ಥರ ಮನವಿಯನ್ನು ಸ್ವೀಕರಿಸಿದ ಅಧಿಕಾರಿಗಳು, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande