ಆಳಂದ ದರ್ಗಾ ಗಲಾಟೆ ಪ್ರಕರಣ ವಾಪಸ್ ; ರಾಜ್ಯಪಾಲರಿಗೆ ಬಿಜೆಪಿ ದೂರು
ಬೆಂಗಳೂರು, 02 ಜೂನ್ (ಹಿ.ಸ.) : ಆ್ಯಂಕರ್ : ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವ ನಿರ್ಧಾರವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಬಿಜೆಪಿ ನಿಯೋಗವು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ. ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾ
ಮನವಿ


ಬೆಂಗಳೂರು, 02 ಜೂನ್ (ಹಿ.ಸ.) :

ಆ್ಯಂಕರ್ : ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್ ಪಡೆದಿರುವ ನಿರ್ಧಾರವನ್ನು ರದ್ದುಪಡಿಸುವಂತೆ ಒತ್ತಾಯಿಸಿ ಬಿಜೆಪಿ ನಿಯೋಗವು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ನಿಯೋಗ ಮಧ್ಯಾಹ್ನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.

ಪ್ರಕರಣ ಹಿಂಪಡೆಯುವ ನಿರ್ಧಾರವನ್ನು ಮರುಪರಿಶೀಲಿಸಿ, ಅದನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ರಾಜ್ಯಪಾಲರನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಆಳಂದದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಹಲವು ವರ್ಷಗಳಿಂದ ವಿವಾದಾತ್ಮಕ ಪರಿಸ್ಥಿತಿ ಮುಂದುವರಿದಿದ್ದು, ಈ ಹಿಂದೆ ನಡೆದ ಗಲಾಟೆಯಲ್ಲಿ ಹಲ್ಲೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾದ ಘಟನೆಗಳು ನಡೆದಿವೆ ಎಂದು ಆರೋಪಿಸಿದರು.

ಪ್ರಕರಣ ನ್ಯಾಯಾಲಯದಲ್ಲಿರುವ ಸಂದರ್ಭದಲ್ಲೇ ಸರ್ಕಾರ ಅದನ್ನು ಹಿಂಪಡೆಯಲು ಮುಂದಾಗಿರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಮತಬ್ಯಾಂಕ್ ರಾಜಕಾರಣಕ್ಕಾಗಿ ಸರ್ಕಾರ ಈ ಕ್ರಮ ಕೈಗೊಂಡಿದ್ದು, ಗಂಭೀರ ಆರೋಪ ಎದುರಿಸುತ್ತಿರುವವರಿಗೆ ಶಿಕ್ಷೆಯಿಂದ ತಪ್ಪಿಸಿಕೊಡುವ ಪ್ರಯತ್ನವಾಗಿದೆ ಎಂದು ಟೀಕಿಸಿದರು.

ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದವರ ವಿರುದ್ಧ ಕ್ರಮ ಜರುಗಬೇಕಾದರೆ, ಪ್ರಕರಣವನ್ನು ಮರುತೆರೆದು ತನಿಖೆ ಮುಂದುವರಿಸಬೇಕು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.

ಪ್ರಕರಣ ಹಿಂಪಡೆಯುವ ನಿರ್ಧಾರದಿಂದ ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande