ಸಕಲೇಶಪುರದಲ್ಲಿ ಸಿಇಒ ಶುಭಂ ಶುಕ್ಲಾ ಕ್ಷೇತ್ರ ಭೇಟಿ
ಹಾಸನ, 02 ಜೂನ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ ಅವರು ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹಾಗೂ ಹಲಸುಲಿಗೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಮತ್ತು ಗುಣಮಟ್ಟವನ್ನು ಪರಿಶೀಲಿಸಿದರು. ಕ್ಷೇತ್ರ
Visit


ಹಾಸನ, 02 ಜೂನ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಂ ಶುಕ್ಲಾ ಅವರು ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹಾಗೂ ಹಲಸುಲಿಗೆ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಮತ್ತು ಗುಣಮಟ್ಟವನ್ನು ಪರಿಶೀಲಿಸಿದರು.

ಕ್ಷೇತ್ರ ಭೇಟಿಯ ವೇಳೆ ಹಲಸುಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆ.ಆರ್.ಐ.ಡಿ.ಎಲ್. ವತಿಯಿಂದ 5054 ಯೋಜನೆಯಡಿ ನಿರ್ಮಿಸಲಾದ ಸಿಸಿ ರಸ್ತೆ ಹಾಗೂ ಸಿಸಿ ಚರಂಡಿ ಕಾಮಗಾರಿಗಳನ್ನು ವೀಕ್ಷಿಸಿದರು. ಅಲ್ಲದೆ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಕೈಗೊಂಡ ಸಿಸಿ ಚರಂಡಿ ಕಾಮಗಾರಿಯನ್ನು ಪರಿಶೀಲಿಸಿ, ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನರೇಗಾ ಯೋಜನೆಯಡಿ ತೆರೆದ ಬಾವಿ ನಿರ್ಮಾಣ, ಅಡಿಕೆ ಸಸಿ ನೆಡುವಿಕೆ ಸೇರಿದಂತೆ ವಿವಿಧ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿರುವ ಫಲಾನುಭವಿಗಳೊಂದಿಗೆ ಸಮಾಲೋಚನೆ ನಡೆಸಿ, ಯೋಜನೆಗಳ ಪರಿಣಾಮಕಾರಿತ್ವದ ಕುರಿತು ಮಾಹಿತಿ ಪಡೆದರು.

ಬಳಿಕ ಹಾನುಬಾಳು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿದ ಅವರು, ಶಾಲೆಯ ಮಧ್ಯಾಹ್ನ ಬಿಸಿಯೂಟ ಯೋಜನೆ, ಶೌಚಾಲಯ ವ್ಯವಸ್ಥೆ ಹಾಗೂ ಮಕ್ಕಳಿಗೆ ನೀಡಲಾಗುತ್ತಿರುವ ಶಿಕ್ಷಣದ ಗುಣಮಟ್ಟವನ್ನು ಪರಿಶೀಲಿಸಿದರು. ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು, ಸ್ಥಳೀಯ ನಿವಾಸಿಗಳು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ವಿದ್ಯಾರ್ಥಿಗಳೊಂದಿಗೆ ಕುಳಿತು ಬಿಸಿಯೂಟ ಸೇವಿಸಿದ ಸಿಇಒ ಅವರು, ಆಹಾರದ ಗುಣಮಟ್ಟವನ್ನು ಮೆಚ್ಚಿ ಅಡುಗೆ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.

ನಂತರ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ, ಮನೆಮನೆಗಳಿಂದ ಸಂಗ್ರಹವಾಗುವ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕ್ಷೇತ್ರ ಭೇಟಿಯಲ್ಲಿ ಕೆ.ಆರ್.ಐ.ಡಿ.ಎಲ್. ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕರು ಹಾಗೂ ಇತರ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande