
ಬಳ್ಳಾರಿ, 20 ಜೂನ್ (ಹಿ.ಸ.) :
ಆ್ಯಂಕರ್ : ತಾಲ್ಲೂಕಿನ ಅಲ್ಲಿಪುರ ಗ್ರಾಮದ(ರವಿಕುಮಾರ) ಲೇಬರ್ ಕಾರ್ಡ್ ಮಾಡಿಸಿ ಮೆಸ್ತ್ರಿ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಪುನ: ಮನೆಗೆ ಬಾರದೇ ಕಾಣೆಯಾಗಿರುವ ಕುರಿತು ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೆÇಲೀಸ್ ಸಬ್ ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು :
ಅಂದಾಜು 5.4 ಅಡಿ ಎತ್ತರ, ದುಂಡು ಮುಖ, ಕಪ್ಪು ಮೈಬಣ್ಣ, ಧೃಡವಾದ ಮೈ ಕಟು,್ಟ ಕಪ್ಪು ಕೂದಲು ಹೊಂದಿರುತ್ತಾನೆ. ಕಾಣೆಯಾದ ಸಂರ್ಧಭದಲ್ಲಿ ಪಿಂಕ್ ಬಣ್ಣದ ತುಂಬು ತೋಳಿನ ಶರ್ಟ್ ಹಾಗೂ ನೀಲಿ ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ ಭಾಷೆ ಮಾತನಾಡುತ್ತಾನೆ.
ಕಾಣೆಯಾದ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೆÇಲೀಸ್ ಠಾಣೆಯ ದೂ.08392276461, 9480803049, ಬಳ್ಳಾರಿ ಎಸ್.ಪಿ ಕಚೇರಿ ದೂ.08392-258400 ಅಥವಾ ಬಳ್ಳಾರಿ ಪೆÇಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್