
ವಿಜಯಪುರ, 20 ಜೂನ್ (ಹಿ.ಸ.) :
ಆಂಕರ್ : ಸಾಮಾಜಿಕ ಸೇವಾ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವ ಗಿರೀಶ ಫೌಂಡೇಶನ್ ವತಿಯಿಂದ ಸಂಜೆ 6:30 ಗಂಟೆಗೆ ಬಾಗಲಕೋಟೆ ಜಿಲ್ಲೆಯ ಕೆಂಪರೋಡದ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ವಿಶೇಷ ಅನ್ನಪ್ರಸಾದ ಸೇವೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಭಕ್ತಿಭಾವ, ಸೇವಾ ಮನೋಭಾವ ಮತ್ತು ಸಮಾಜಮುಖಿ ಚಟುವಟಿಕೆಗಳ ಭಾಗವಾಗಿ ಆಯೋಜಿಸಿರುವ ಈ ಅನ್ನಪ್ರಸಾದ ಸೇವೆಯಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರು, ಸಾರ್ವಜನಿಕರು ಹಾಗೂ ಸುತ್ತಮುತ್ತಲಿನ ಜನರು ಪಾಲ್ಗೊಂಡು ಪ್ರಸಾದ ಸ್ವೀಕರಿಸುವಂತೆ ಫೌಂಡೇಶನ್ ವತಿಯಿಂದ ಮನವಿ ಮಾಡಲಾಗಿದೆ.
ಗಿರೀಶ ಫೌಂಡೇಶನ್ ಹಲವು ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅನ್ನದಾನವು ಶ್ರೇಷ್ಠ ಸೇವೆ ಎಂಬ ಧ್ಯೇಯದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಶ್ರೀ ಪಂಚಮುಖಿ ಆಂಜನೇಯ ಸ್ವಾಮಿಯ ಆಶೀರ್ವಾದದೊಂದಿಗೆ ನಡೆಯಲಿರುವ ಈ ಅನ್ನಪ್ರಸಾದ ಸೇವೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande