ಮೇಕೆದಾಟು : ತಮಿಳುನಾಡು ಸರ್ಕಾರಕ್ಕೆ ಕಾಂಗ್ರೆಸ್ ಬೆಂಬಲ ಹಿಂಪಡೆಯಲಿ-ಬೊಮ್ಮಾಯಿ
ಹಾವೇರಿ, 20 ಜೂನ್ (ಹಿ.ಸ.) : ಆ್ಯಂಕರ್ : ಮೇಕೆದಾಟು ಯೋಜನೆಗೆ ವಿರೋಧವಾಗಿ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಿರುವ ಹಿನ್ನೆಲೆಯಲ್ಲಿ, ತಮಿಳು ನಾಡಿನ ಆಡಳಿತಾರೂಢ ಸರ್ಕಾರಕ್ಕೆ ಕಾಂಗ್ರೆಸ್ ನೀಡಿರುವ ಬೆಂಬಲವನ್ನು ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ
ಬೊಮ್ಮಾಯಿ


ಹಾವೇರಿ, 20 ಜೂನ್ (ಹಿ.ಸ.) :

ಆ್ಯಂಕರ್ : ಮೇಕೆದಾಟು ಯೋಜನೆಗೆ ವಿರೋಧವಾಗಿ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಿರುವ ಹಿನ್ನೆಲೆಯಲ್ಲಿ, ತಮಿಳು ನಾಡಿನ ಆಡಳಿತಾರೂಢ ಸರ್ಕಾರಕ್ಕೆ ಕಾಂಗ್ರೆಸ್ ನೀಡಿರುವ ಬೆಂಬಲವನ್ನು ಹಿಂಪಡೆಯಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.

ಹಾವೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗಾಗಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ಹೇಳಿದರು.

“ತಮಿಳು ನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕರಿಸಿರುವುದು ಅವರ ನಿಲುವು. ನ್ಯಾಯಾಲಯದಲ್ಲಿ ತಮಿಳುನಾಡು ಸರ್ಕಾರ ಹೋದಾಗ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹೇಳಲಾಗಿದೆ. ತಾಂತ್ರಿಕವಾಗಿ ಏನು ನಡೆಯಬೇಕೋ ಅದು ನಡೆಯಲಿ. ಆದರೆ ಕರ್ನಾಟಕ ಸರ್ಕಾರ ಆದಷ್ಟು ಬೇಗ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ, ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳಬೇಕು” ಎಂದು ಹೇಳಿದರು.

“ನೆಲ, ಜಲ ಹಾಗೂ ಭಾಷೆಯಂತಹ ವಿಚಾರಗಳಲ್ಲಿ ನಾವೆಲ್ಲರೂ ಒಂದಾಗಿದ್ದೇವೆ. ರಾಜ್ಯದ ಹಿತದೃಷ್ಟಿಯಿಂದ ಸರ್ಕಾರ ಕೈಗೊಳ್ಳುವ ಕ್ರಮಗಳಿಗೆ ನಮ್ಮ ಬೆಂಬಲವಿದೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೇಕೆದಾಟು ದಕ್ಷಿಣ ಭಾರತದ ಹೃದಯ ಭಾಗದ ಯೋಜನೆ ಎಂದು ಹೇಳುತ್ತಾರೆ. ಹಾಗಿದ್ದರೆ ತಮಿಳುನಾಡಿನ ಸರ್ಕಾರಕ್ಕೆ ಕಾಂಗ್ರೆಸ್ ನೀಡಿರುವ ಬೆಂಬಲವನ್ನು ಹಿಂಪಡೆಯಬೇಕು” ಎಂದು ಬೊಮ್ಮಾಯಿ ಒತ್ತಾಯಿಸಿದರು.

ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳಲ್ಲಿ ರಾಜಕೀಯ ಭೇದಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲ ಪಕ್ಷಗಳು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಾಗಿದೆ ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande