
ಬೆಂಗಳೂರು, 20 ಜೂನ್ (ಹಿ.ಸ.) :
ಆ್ಯಂಕರ್ : ತಮ್ಮ ಜನ್ಮದಿನವನ್ನು ವಿಶಿಷ್ಟ ಹಾಗೂ ಅರ್ಥಪೂರ್ಣವಾಗಿ ಆಚರಿಸಿದ ನೋರೊನ್ಹಾ , ಮೂರು ವಿವಿಧ ಆಶ್ರಮಗಳಿಗೆ ತಲಾ ₹20,000ರಂತೆ ಒಟ್ಟು ₹60,000 ದೇಣಿಗೆ ನೀಡಿ ಸಮಾಜಮುಖಿ ಕಾರ್ಯಕ್ಕೆ ಕೈಜೋಡಿಸಿದ್ದಾರೆ.
ಸಾಮಾನ್ಯವಾಗಿ ಜನ್ಮದಿನಗಳನ್ನು ಅದ್ದೂರಿಯಾಗಿ ಆಚರಿಸುವ ಬದಲು, ಅಗತ್ಯವಿರುವವರ ನೆರವಿಗೆ ಧಾವಿಸುವ ಉದ್ದೇಶದಿಂದ ಆಶ್ರಮಗಳಿಗೆ ಆರ್ಥಿಕ ಸಹಾಯ ಮಾಡಿರುವುದು ಗಮನ ಸೆಳೆದಿದೆ. ಈ ದೇಣಿಗೆಯಿಂದ ಆಶ್ರಮಗಳ ನಿವಾಸಿಗಳಲ್ಲಿ ಸಂತಸ ಮೂಡಿದ್ದು, ಅವರ ಅಗತ್ಯಗಳಿಗೆ ನೆರವಾಗಲಿದೆ.
ಈ ಸಂದರ್ಭದಲ್ಲಿ ಪಿಸಿಎ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೋರೊನ್ಹಾ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಲಾಯಿತು. ಸಮಾಜದ ದುರ್ಬಲ ವರ್ಗಗಳ ಬಗ್ಗೆ ಅವರು ತೋರಿದ ಕಾಳಜಿ ಮತ್ತು ಮಾನವೀಯತೆ ಶ್ಲಾಘನೀಯ ಎಂದು ಟ್ರಸ್ಟ್ ಪ್ರಶಂಸಿಸಿದೆ.
ನೋರೊನ್ಹಾ ಅವರಿಗೆ ಉತ್ತಮ ಆರೋಗ್ಯ, ನೆಮ್ಮದಿ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಸಮಾಜಮುಖಿ ಸೇವೆಗಳನ್ನು ಮಾಡುವ ಶಕ್ತಿ ದೊರೆಯಲಿ ಎಂದು ಪಿಸಿಎ ಚಾರಿಟೇಬಲ್ ಟ್ರಸ್ಟ್ ಪ್ರಾರ್ಥಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.