ರಾಷ್ಟ್ರಪತಿ ದ್ರೌಪದಿ ಮುರ್ಮು ಜನ್ಮದಿನ ಗಣ್ಯರ ಶುಭಾಶಯ
ನವದೆಹಲಿ, 20 ಜೂನ್ (ಹಿ.ಸ.) : ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜನ್ಮದಿನದ ಅಂಗವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯ ನಾಯಕರು ಶುಭಾಶಯ ಕೋರಿದ್ದಾರೆ. ರಾಷ್ಟ್ರಪತಿಯವರ ಸಾಮಾನ್ಯ ಹಿನ್ನೆಲೆಯಿಂದ ದೇಶದ
President birthday wish


ನವದೆಹಲಿ, 20 ಜೂನ್ (ಹಿ.ಸ.) :

ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಜನ್ಮದಿನದ ಅಂಗವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಗಣ್ಯ ನಾಯಕರು ಶುಭಾಶಯ ಕೋರಿದ್ದಾರೆ.

ರಾಷ್ಟ್ರಪತಿಯವರ ಸಾಮಾನ್ಯ ಹಿನ್ನೆಲೆಯಿಂದ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯವರೆಗೆ ತಲುಪಿದ ಪಯಣವು ಮಹಿಳೆಯರು, ಯುವಕರು ಹಾಗೂ ವಂಚಿತ ವರ್ಗಗಳಿಗೆ ಪ್ರೇರಣೆಯಾಗಿದೆ ಎಂದು ಓಂ ಬಿರ್ಲಾ ಹೇಳಿದ್ದಾರೆ. ಅಮಿತ್ ಶಾ ಅವರು ಅವರ ಜೀವನವನ್ನು ಹೋರಾಟ, ಸಮರ್ಪಣೆ ಮತ್ತು ರಾಷ್ಟ್ರಭಕ್ತಿಯ ಮಾದರಿ ಎಂದು ಬಣ್ಣಿಸಿದ್ದಾರೆ.

ರಾಜನಾಥ್ ಸಿಂಗ್ ಅವರು ಸಮಾಜಸೇವೆ ಮತ್ತು ಸಾಮಾಜಿಕ ನ್ಯಾಯದತ್ತ ಅವರ ಬದ್ಧತೆಯನ್ನು ಶ್ಲಾಘಿಸಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ಅವರು ಅವರ ಪಯಣವನ್ನು ಭಾರತೀಯ ಪ್ರಜಾಪ್ರಭುತ್ವದ ಶಕ್ತಿಯ ಪ್ರತೀಕವೆಂದು ಹೇಳಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ, ರಾಜಸ್ಥಾನ ಮುಖ್ಯಮಂತ್ರಿ ಭಜನ್ಲಾಲ್ ಶರ್ಮಾ ಹಾಗೂ ಹರಿಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಸೇರಿದಂತೆ ಹಲವು ನಾಯಕರು ರಾಷ್ಟ್ರಪತಿಯವರ ಸರಳತೆ, ಸೇವಾ ಮನೋಭಾವ ಮತ್ತು ಜನಜಾತಿ ಸಮುದಾಯದ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಕೊಂಡಾಡಿದ್ದಾರೆ.

ರಾಷ್ಟ್ರಪತಿಯವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಯಶಸ್ವಿ ಸಾರ್ವಜನಿಕ ಜೀವನಕ್ಕಾಗಿ ಎಲ್ಲ ನಾಯಕರು ಶುಭ ಹಾರೈಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande