
ಬೆಂಗಳೂರು, 20 ಜೂನ್ (ಹಿ.ಸ.) :
ಆ್ಯಂಕರ್ : ಸಾರ್ವಜನಿಕರ ಕುಂದುಕೊರತೆಗಳು ಹಾಗೂ ವಿವಿಧ ಹೋರಾಟಗಳಿಂದ ಬರುವ ಅಹವಾಲುಗಳನ್ನು ಆಲಿಸಿ ಪರಿಹರಿಸಲು ರಾಜ್ಯ ಸರ್ಕಾರ ಹೊಸದಾಗಿ ‘ಪ್ರಜಾಸೇವೆ ಇಲಾಖೆ’ ಸ್ಥಾಪಿಸಲು ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ಇಲಾಖೆಗೆ ಪ್ರತ್ಯೇಕ ಸಚಿವರನ್ನು ನೇಮಿಸಲಾಗುವುದು ಹಾಗೂ ಹಿರಿಯ ಐಎಎಸ್ ಅಧಿಕಾರಿಯನ್ನು ನಿಯೋಜಿಸಿ ಸಾರ್ವಜನಿಕರಿಂದ ಬರುವ ಮನವಿಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರು ವಾರಕ್ಕೊಮ್ಮೆ ಸ್ಥಳೀಯ ಶಾಸಕರೊಂದಿಗೆ ‘ಜನಸ್ಪಂದನ’ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಆಲಿಸಬೇಕು ಎಂದು ಸೂಚಿಸಲಾಗಿದೆ. ಜನರ ಕಷ್ಟಗಳಿಗೆ ಕಾನೂನು ಚೌಕಟ್ಟಿನೊಳಗೆ ಸ್ಪಂದಿಸಿ ನ್ಯಾಯ ಒದಗಿಸುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.