ಪಶ್ಚಿಮ ಬಂಗಾಳ ದಿನಾಚರಣೆಗೆ ಪ್ರಧಾನಿ ಮೋದಿ, ಅಮಿತ್ ಶಾ ಶುಭಾಶಯ
ನವದೆಹಲಿ, 20 ಜೂನ್ (ಹಿ.ಸ.) : ಆ್ಯಂಕರ್ : ಪಶ್ಚಿಮ ಬಂಗಾಳ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದು, ಅವರ ಸುಖ, ಶಾಂತಿ ಮತ್ತು ಸಮೃದ್ಧಿಗಾಗಿ ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ
ಮೋದಿ, ಶಾ


ನವದೆಹಲಿ, 20 ಜೂನ್ (ಹಿ.ಸ.) :

ಆ್ಯಂಕರ್ : ಪಶ್ಚಿಮ ಬಂಗಾಳ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದ ಜನತೆಗೆ ಹೃತ್ಪೂರ್ವಕ ಶುಭಾಶಯಗಳನ್ನು ಕೋರಿದ್ದು, ಅವರ ಸುಖ, ಶಾಂತಿ ಮತ್ತು ಸಮೃದ್ಧಿಗಾಗಿ ಹಾರೈಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, ಸಾಹಿತ್ಯ, ಸಂಗೀತ, ಕಲೆ, ಆಧ್ಯಾತ್ಮ, ವಿಜ್ಞಾನ, ವ್ಯಾಪಾರ, ಸಮಾಜ ಸುಧಾರಣೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಪಶ್ಚಿಮ ಬಂಗಾಳದ ಕೊಡುಗೆ ಭಾರತವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ಹೇಳಿದ್ದಾರೆ.

ಜೂನ್ 20 ಪಶ್ಚಿಮ ಬಂಗಾಳದ ಇತಿಹಾಸದಲ್ಲಿ ಮಹತ್ವದ ದಿನವಾಗಿದ್ದು, ಈ ರಾಜ್ಯವು ಭಾರತದ ಭಾಗವಾಗಿ ಉಳಿಯಲು ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಅಮೂಲ್ಯ ಕೊಡುಗೆ ಕಾರಣವಾಗಿದೆ ಎಂದು ಅವರು ಸ್ಮರಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಮತ್ತು ಜನರ ಸಮೃದ್ಧಿಗಾಗಿ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ಸರ್ಕಾರದೊಂದಿಗೆ ಕೈಜೋಡಿಸಿ ಕೆಲಸ ಮಾಡುವುದಾಗಿ ತಿಳಿಸಿದ್ದಾರೆ.

ಅಮಿತ್ ಶಾ ಅವರು ತಮ್ಮ ಶುಭಾಶಯ ಸಂದೇಶದಲ್ಲಿ, ಸಂಸ್ಕೃತಿ, ಆಧ್ಯಾತ್ಮ, ಜ್ಞಾನ ಮತ್ತು ವಿಜ್ಞಾನದ ನೆಲವಾದ ಪಶ್ಚಿಮ ಬಂಗಾಳವು ಭಕ್ತಿ ಚಳವಳಿ, ಸ್ವಾತಂತ್ರ್ಯ ಹೋರಾಟ, ಪುನರುಜ್ಜೀವನ ಹಾಗೂ ರಾಷ್ಟ್ರ ನಿರ್ಮಾಣದ ಪ್ರತಿಯೊಂದು ಹಂತದಲ್ಲೂ ವಿಶಿಷ್ಟ ಕೊಡುಗೆ ನೀಡಿದೆ ಎಂದು ಹೇಳಿದ್ದಾರೆ.

ಸ್ವಾಮಿ ವಿವೇಕಾನಂದ, ಬಂಕಿಮಚಂದ್ರ ಚಟ್ಟೋಪಾಧ್ಯಾಯ, ರವೀಂದ್ರನಾಥ ಠಾಗೋರ್, ನೇತಾಜಿ ಸುಭಾಷ್ಚಂದ್ರ ಬೋಸ್ ಹಾಗೂ ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರಂತಹ ಮಹನೀಯರ ನೆಲವಾದ ಬಂಗಾಳ ತನ್ನ ಐತಿಹಾಸಿಕ ವೈಭವವನ್ನು ಮರುಸ್ಥಾಪಿಸುವ ದಾರಿಯಲ್ಲಿ ಸಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಎಲ್ಲ ಜನರ ಜೀವನ ಸುಖ, ಶಾಂತಿ, ಸಮೃದ್ಧಿ ಮತ್ತು ಕಲ್ಯಾಣದಿಂದ ಕೂಡಿರಲಿ ಎಂದು ದುರ್ಗಾದೇವಿಗೆ ಪ್ರಾರ್ಥಿಸುವುದಾಗಿ ಅಮಿತ್ ಶಾ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande