
ಹುಬ್ಬಳ್ಳಿ, 21 ಜೂನ್ (ಹಿ.ಸ.):
ಆ್ಯಂಕರ್:
ಕರ್ನಾಟಕದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಪ್ರೊ. ಎಂ. ನಾಗರಾಜ್ ಹಾಗೂ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿರುವ ಲಿಂಗರಾಜ್ ಪಾಟೀಲ್ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ಹುಬ್ಬಳ್ಳಿಯ ಅರವಿಂದ ನಗರದಲ್ಲಿರುವ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಹಾಗೂ ಭಾರತೀಯ ಜನತಾ ಪಕ್ಷದ ಸಂಘಟನೆಯಲ್ಲಿ ಸೇವೆ ಸಲ್ಲಿಸಿರುವ ಈ ಇಬ್ಬರು ನಾಯಕರು ತಮ್ಮ ಹೊಸ ಜವಾಬ್ದಾರಿಗಳ ಮೂಲಕ ರಾಷ್ಟ್ರ ಮತ್ತು ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಜನರ ಆಶೋತ್ತರಗಳಿಗೆ ಸ್ಪಂದಿಸುವ ಕಾರ್ಯದಲ್ಲಿ ಅವರು ಮತ್ತಷ್ಟು ಪರಿಣಾಮಕಾರಿಯಾಗಿ ತೊಡಗಿಸಿಕೊಳ್ಳಲಿ ಎಂದು ಹಾರೈಸಿದ ಪ್ರಲ್ಹಾದ ಜೋಶಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ‘ವಿಕಸಿತ ಭಾರತ’ ನಿರ್ಮಾಣದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಅವರ ಕಾರ್ಯಯಾತ್ರೆ ಯಶಸ್ವಿಯಾಗಲಿ ಎಂದು ಶುಭ ಕೋರಿದರು.
ಅಭಿನಂದನಾ ಸಮಾರಂಭದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಶಾಸಕ ಅರವಿಂದ ಬೆಲ್ಲದ್, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ ಹಾಗೂ ಪ್ರದೀಪ್ ಶೆಟ್ಟರ್, ಮಹಾಪೌರೆ ಜ್ಯೋತಿ ಪಾಟೀಲ್, ಉಪಮಹಾಪೌರ ಸಂತೋಷ್ ಚೌವಾಣ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಪದಾಧಿಕಾರಿಗಳು, ಪಾಲಿಕೆ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.