ಹರಿಪ್ರಸಾದ್ ನೇತೃತ್ವದಲ್ಲಿ ಕಾಂಗ್ರೆಸ್ ಮತ್ತಷ್ಟು ಬಲಿಷ್ಠವಾಗಲಿದೆ : ಸತೀಶ್ ಜಾರಕಿಹೊಳಿ
ಬೆಂಗಳೂರು, 21 ಜೂನ್ (ಹಿ.ಸ.) : ಆ್ಯಂಕರ್ : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ಕೆ. ಹರಿಪ್ರಸಾದ್ ಅವರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶುಭಾಶಯ ಕೋರಿದ್ದು, ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಸಂಘಟಿತವಾಗಿ ಹಾಗೂ ಬಲಿಷ್ಠವಾಗಿ ಬೆಳೆಯಲಿದೆ ಎಂಬ
ಸತೀಶ್ ಜಾರಕಿಹೊಳಿ


ಬೆಂಗಳೂರು, 21 ಜೂನ್ (ಹಿ.ಸ.) :

ಆ್ಯಂಕರ್ : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಿ.ಕೆ. ಹರಿಪ್ರಸಾದ್ ಅವರಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶುಭಾಶಯ ಕೋರಿದ್ದು, ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಸಂಘಟಿತವಾಗಿ ಹಾಗೂ ಬಲಿಷ್ಠವಾಗಿ ಬೆಳೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿ ಬಿ.ಕೆ. ಹರಿಪ್ರಸಾದ್ ಅವರಿಗೆ ಅಭಿನಂದನೆ ಸಲ್ಲಿಸಿದ ಬಳಿಕ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿ.ಕೆ. ಹರಿಪ್ರಸಾದ್ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿರುವ ನಾಯಕರು. ಪಕ್ಷದ ತತ್ವ-ಸಿದ್ಧಾಂತಗಳ ಮೇಲಿನ ಅವರ ಅಚಲ ಬದ್ಧತೆ ಹಾಗೂ ಸಂಘಟನಾ ಕೌಶಲ್ಯ ಕಾಂಗ್ರೆಸ್ ಪಕ್ಷಕ್ಕೆ ಹೊಸ ಶಕ್ತಿ ತುಂಬಲಿದೆ ಎಂದು ಜಾರಕಿಹೊಳಿ ಹೇಳಿದರು.

ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲಿದ್ದು, ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಎತ್ತಿಹಿಡಿಯುವ ಕೆಲಸ ಮುಂದುವರಿಯಲಿದೆ. ಜೊತೆಗೆ ಫ್ಯಾಸಿಸ್ಟ್ ಹಾಗೂ ಜನವಿರೋಧಿ ಶಕ್ತಿಗಳ ವಿರುದ್ಧ ಕಾಂಗ್ರೆಸ್ ತನ್ನ ಹೋರಾಟವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸಲಿದೆ ಎಂದು ಅವರು ತಿಳಿಸಿದರು.

ಬೂತ್ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ಪಕ್ಷ ಸಂಘಟನೆಯನ್ನು ಸದೃಢಗೊಳಿಸುವಲ್ಲಿ ಬಿ.ಕೆ. ಹರಿಪ್ರಸಾದ್ ಅವರ ದೂರದೃಷ್ಟಿಯ ನಾಯಕತ್ವ ಮಹತ್ವದ ಪಾತ್ರ ವಹಿಸಲಿದೆ. ಅವರ ಮಾರ್ಗದರ್ಶನ ಕಾರ್ಯಕರ್ತರಲ್ಲಿ ಹೊಸ ಚೈತನ್ಯ, ಆತ್ಮವಿಶ್ವಾಸ ಹಾಗೂ ಉತ್ಸಾಹವನ್ನು ತುಂಬಿ, ಸಂಘಟನೆಯನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ ಕಾಂಗ್ರೆಸ್ ಪಕ್ಷವು ಹೊಸ ಸಾಧನೆಗಳತ್ತ ಮುನ್ನಡೆಯಲಿ ಎಂದು ಹಾರೈಸಿದ ಅವರು, ರಾಜ್ಯದಲ್ಲಿ ಪಕ್ಷದ ಬೆಳವಣಿಗೆಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕೆಂದು ಕರೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande