ಜವಾಹರ್ ನವೋದಯ ವಿದ್ಯಾಲಯ: 11ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, 21 ಜೂನ್ (ಹಿ.ಸ.): ಆ್ಯಂಕರ್: ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂ
ಜವಾಹರ್ ನವೋದಯ ವಿದ್ಯಾಲಯ: 11ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ


ಶಿವಮೊಗ್ಗ, 21 ಜೂನ್ (ಹಿ.ಸ.):

ಆ್ಯಂಕರ್: ಶಿವಮೊಗ್ಗ ಜಿಲ್ಲೆಯ ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿನ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಪ್ರವೇಶಾತಿಗಾಗಿ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಜವಾಹರ್ ನವೋದಯ ವಿದ್ಯಾಲಯದ ಕಾರ್ಯಾಲಯಕ್ಕೆ ಭೇಟಿ ನೀಡಿ, ಜೂನ್ 25 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕಾಗಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು 2025-26ನೇ ಸಾಲಿನಲ್ಲಿ 10ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು. 10ನೇ ತರಗತಿಯ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ ಶೇಕಡಾವಾರು 60ರಷ್ಟು ಅಂಕಗಳನ್ನು ಪಡೆದಿರಬೇಕು. ಅಭ್ಯರ್ಥಿಯು ದಿನಾಂಕ 01.06.2009 ರಿಂದ 31.07.2011 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು.

ಹೆಚ್ಚಿನ ಮಾಹಿತಿ ಹಾಗೂ ಸಂಪರ್ಕಕ್ಕಾಗಿ ವಿದ್ಯಾಲಯದ ಅಧಿಕೃತ ಇಮೇಲ್ (jnvshimoga@gmail.com) ಅಥವಾ ವೆಬ್‌ಸೈಟ್ (https://navodaya.gov.in/nvs/nvs-school/SHIMOGA/en/home/index.html) ಅನ್ನು ಗಮನಿಸಬಹುದಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande