
ಭೋಪಾಲ್, 21 ಜೂನ್ (ಹಿ.ಸ.) :
ಆ್ಯಂಕರ್ : 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಧ್ಯ ಪ್ರದೇಶದ ಜಬಲ್ಪುರದಲ್ಲಿರುವ ಗ್ಯಾರಿಸನ್ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಯೋಗಾಭ್ಯಾಸ ನಡೆಸಿದರು.
ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ಧ್ಯೇಯವಾಕ್ಯದಡಿ ನಡೆದ ಈ ಕಾರ್ಯಕ್ರಮದಲ್ಲಿ ಸುಮಾರು 5,000 ನಾಗರಿಕರು ಹಾಗೂ 31 ಶಾಲೆಗಳ 3,400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಯೋಗಾಸನಗಳು ಮತ್ತು ಪ್ರಾಣಾಯಾಮ ಅಭ್ಯಾಸ ಮಾಡಿದರು.
ರಾಜ್ಯಪಾಲ ಮಂಗುಭಾಯಿ ಪಟೇಲ್, ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಸೇರಿದಂತೆ ಹಲವು ಸಚಿವರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಇದೇ ವೇಳೆ ಇಂದೋರ್ ನಗರದಲ್ಲಿ ಸಾವಿರಾರು ಮಂದಿ ಮೂರು ನಿಮಿಷಗಳಿಗಿಂತ ಹೆಚ್ಚು ಕಾಲ ನಿರಂತರವಾಗಿ ಭ್ರಮರಿ ಪ್ರಾಣಾಯಾಮ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದರು.
ಭೋಪಾಲ್, ಗ್ವಾಲಿಯರ್, ಉಜ್ಜಯಿನಿ ಹಾಗೂ ಸಾಂಚಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಸಾಮೂಹಿಕ ಯೋಗ ಕಾರ್ಯಕ್ರಮಗಳು ನಡೆದಿದ್ದು, ಸಾವಿರಾರು ಜನರು ಭಾಗವಹಿಸಿ ಆರೋಗ್ಯಕರ ಜೀವನಶೈಲಿಯ ಸಂದೇಶ ಸಾರಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.