
ತುಮಕೂರು, 21 ಜೂನ್ (ಹಿ.ಸ.):
ಆ್ಯಂಕರ್:
ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ತುಮಕೂರು ನಗರದಲ್ಲಿ ಪ್ರಗತಿಯಲ್ಲಿರುವ ವಿವಿಧ ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿದರು.
ನಗರದ ಪ್ರಮುಖ ರಸ್ತೆ ಅಭಿವೃದ್ಧಿ ಯೋಜನೆಗಳ ಸ್ಥಳಗಳಿಗೆ ಭೇಟಿ ನೀಡಿದ ಸಚಿವರು, ಕಾಮಗಾರಿಗಳ ಪ್ರಗತಿ, ಗುಣಮಟ್ಟ ಹಾಗೂ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕಾಮಗಾರಿಗಳನ್ನು ಶೀಘ್ರ ಹಾಗೂ ಗುಣಮಟ್ಟದಿಂದ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿ ಹೆಬ್ಬಾಕರ್, ಬಿಜೆಪಿ ಮುಖಂಡ ಚಂದ್ರಶೇಖರ್ ಬಾಬು, ಬೈರಪ್ಪ ಸೇರಿದಂತೆ ಪಕ್ಷದ ಮುಖಂಡರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.