ಜೂನ್ 23ರಂದು ರಾಜ್ಯಮಟ್ಟದ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ
ಹುಬ್ಬಳ್ಳಿ, 21 ಜೂನ್ (ಹಿ.ಸ.): ಆ್ಯಂಕರ್:ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಫೆಡರೇಶನ್ (ಸಿಐಟಿಯು) ನೇತೃತ್ವದಲ್ಲಿ ಜೂನ್ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆಗೆ ಬೆಂಬಲ ಕೋರಲು ಹುಬ್ಬಳ್ಳಿಯ ಬೆಂಗೇರಿ ವಾರದ ಸಂತೆ ಮಾರುಕಟ್ಟೆಯಲ
ಪ್ರಚಾರಾಂದೋಲನ


ಹುಬ್ಬಳ್ಳಿ, 21 ಜೂನ್ (ಹಿ.ಸ.):

ಆ್ಯಂಕರ್:ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಫೆಡರೇಶನ್ (ಸಿಐಟಿಯು) ನೇತೃತ್ವದಲ್ಲಿ ಜೂನ್ 23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆಗೆ ಬೆಂಬಲ ಕೋರಲು ಹುಬ್ಬಳ್ಳಿಯ ಬೆಂಗೇರಿ ವಾರದ ಸಂತೆ ಮಾರುಕಟ್ಟೆಯಲ್ಲಿ ವ್ಯಾಪಕ ಪ್ರಚಾರಾಂದೋಲನ ನಡೆಸಲಾಯಿತು.

ಬೀದಿಬದಿ ವ್ಯಾಪಾರಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಡೆಯಲಿರುವ ಪ್ರತಿಭಟನೆಯಲ್ಲಿ ರಾಜ್ಯದ ಎಲ್ಲ ವ್ಯಾಪಾರಿಗಳು ಭಾಗವಹಿಸುವಂತೆ ಮುಖಂಡರು ಮನವಿ ಮಾಡಿದರು.

ರಾಜ್ಯದ ಎಲ್ಲ ಬೀದಿಬದಿ ವ್ಯಾಪಾರಿಗಳ ಸಮಗ್ರ ಸರ್ವೇ ನಡೆಸಿ ಗುರುತಿನ ಚೀಟಿ ಹಾಗೂ ಪ್ರಮಾಣಪತ್ರ ವಿತರಿಸಬೇಕು. ಬೀದಿಬದಿ ವ್ಯಾಪಾರಿಗಳನ್ನು ಏಕಾಏಕಿ ತೆರವುಗೊಳಿಸುವ ಕ್ರಮವನ್ನು ಕೈಬಿಡಬೇಕು. ಪ್ರಧಾನಮಂತ್ರಿ ಸ್ವನಿಧಿ ಯೋಜನೆಯಡಿ ಜಾಮೀನುರಹಿತ ಸಹಾಯಧನದ ಮೂಲಕ ಮೊದಲ ಕಂತಿನಲ್ಲೇ ಒಂದು ಲಕ್ಷ ರೂಪಾಯಿ ಸಾಲ ನೀಡಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ.

ಇದೇ ವೇಳೆ, ಬೀದಿಬದಿ ವ್ಯಾಪಾರಿಗಳ ಜೀವನೋಪಾಯ ಸಂರಕ್ಷಣೆ ಮತ್ತು ನಿಯಂತ್ರಣ ಅಧಿನಿಯಮ-2014 ಹಾಗೂ ನಿಯಮಗಳು-2019ರ ಅನ್ವಯ ವ್ಯಾಪಾರಿಗಳ ಹಕ್ಕುಗಳನ್ನು ರಕ್ಷಿಸಬೇಕು. ಸುಸಜ್ಜಿತ ಮೂಲಸೌಕರ್ಯಗಳನ್ನೊಳಗೊಂಡ ಪರ್ಯಾಯ ವ್ಯಾಪಾರ ವಲಯ ನಿರ್ಮಾಣವಾಗುವವರೆಗೆ ಈಗಿರುವ ಸ್ಥಳಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಲಾಯಿತು.

ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಪೊಲೀಸರಿಂದ ಆಗುವ ಅನಗತ್ಯ ಕಿರುಕುಳಕ್ಕೆ ತಡೆಹಾಕಬೇಕು. ರಾಜ್ಯ ಸರ್ಕಾರವು ಬೀದಿಬದಿ ವ್ಯಾಪಾರಿಗಳಿಗೆ ಆರ್ಥಿಕ ನೆರವು ಒದಗಿಸಬೇಕು. ಜೊತೆಗೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಬೀದಿಬದಿ ವ್ಯಾಪಾರಿಗಳನ್ನು ನೋಂದಾಯಿಸಿ ಸಮಗ್ರ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಲಾಯಿತು.

ಧಾರವಾಡ ಜಿಲ್ಲೆಯ ಬೀದಿಬದಿ ವ್ಯಾಪಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜೂನ್ 23ರ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಸಂಘಟನೆಯ ಮುಖಂಡರು ಕರೆ ನೀಡಿದರು.

ಪ್ರಚಾರಾಂದೋಲನದಲ್ಲಿ ಸಂಘದ ಅಧ್ಯಕ್ಷೆ ಹುಲಿಗೆಮ್ಮ ಚಲುವಾದಿ, ಪ್ರಧಾನ ಕಾರ್ಯದರ್ಶಿ ಮಹೇಶ ಪತ್ತಾರ, ಟೌನ್ ವೆಂಡರ್ಸ್ ಸಮಿತಿ ಸದಸ್ಯೆ ಅನ್ನಪೂರ್ಣ ಕುಂಕುರಮಠ, ಮುಖಂಡರಾದ ಹನಮಂತ ಚಲುವಾದಿ, ಬುದ್ದಿವಂತ ನರೇಂದ್ರ, ಸಿದ್ದು ಚಲುವಾದಿ, ಪದ್ಮಾವತಿ ತಹಶೀಲ್ದಾರ, ಲಕ್ಷ್ಮೀ ದಾಸರ, ಅಶೋಕ ಚಲುವಾದಿ ಸೇರಿದಂತೆ ಹಲವಾರು ಬೀದಿಬದಿ ವ್ಯಾಪಾರಿಗಳು ಭಾಗವಹಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande