ಯೋಗದಿಂದ ಆರೋಗ್ಯಕರ ಬದುಕು ಸಾಧ್ಯ : ಸಿದ್ದರಾಮಯ್ಯ
ಬೆಂಗಳೂರು, 21 ಜೂನ್ (ಹಿ.ಸ.) : ಆ್ಯಂಕರ್ : ಸದೃಢ ಶರೀರ ಹೊಂದಿದ ವ್ಯಕ್ತಿಗೆ ಮಾತ್ರ ಸದೃಢ ಮನಸ್ಸು ಸಾಧ್ಯವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಶ್ವ ಯೋಗ ದಿನದ ಅಂಗವಾಗಿ ಶುಭಾಶಯ ಸಂದೇಶ ನೀಡಿರುವ ಅವರು, ಯೋಗವು ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮವಾ
ಸಿದ್ದರಾಮಯ್ಯ ಪೋಸ್ಟ್


ಬೆಂಗಳೂರು, 21 ಜೂನ್ (ಹಿ.ಸ.) :

ಆ್ಯಂಕರ್ : ಸದೃಢ ಶರೀರ ಹೊಂದಿದ ವ್ಯಕ್ತಿಗೆ ಮಾತ್ರ ಸದೃಢ ಮನಸ್ಸು ಸಾಧ್ಯವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶ್ವ ಯೋಗ ದಿನದ ಅಂಗವಾಗಿ ಶುಭಾಶಯ ಸಂದೇಶ ನೀಡಿರುವ ಅವರು, ಯೋಗವು ವ್ಯಕ್ತಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಉತ್ತಮವಾಗಿಡುವುದರ ಜೊತೆಗೆ ಸದಾ ಚೈತನ್ಯಯುತವಾಗಿರುವಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಯೋಗಾಭ್ಯಾಸವು ಆರೋಗ್ಯಕರ ಜೀವನಶೈಲಿಗೆ ಪೂರಕವಾಗಿದ್ದು, ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಬದುಕಿನಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

ವಿಶ್ವ ಯೋಗ ದಿನದ ಈ ಸಂದರ್ಭದಲ್ಲಿ ಯೋಗದ ಮೂಲಕ ಸುಂದರ, ಆರೋಗ್ಯಕರ ಹಾಗೂ ಸಂತೋಷಕರ ಬದುಕು ಎಲ್ಲರದ್ದಾಗಲಿ ಎಂದು ಸಿದ್ದರಾಮಯ್ಯ ಹಾರೈಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande