ದೇಹ, ಮನಸನ್ನು ಪ್ರಕೃತಿಯೊಂದಿಗೆ ಜೋಡಿಸುವ ಶಕ್ತಿ ಯೋಗಕ್ಕಿದೆ: ಸಂಸದ ಕೆ.ರಾಜಶೇಖರ ಹಿಟ್ನಾಳ
ಕೊಪ್ಪಳ, 21 ಜೂನ್ (ಹಿ.ಸ.); ಆ್ಯಂಕರ್ : ಮನುಷ್ಯನ ದೇಹ ಮತ್ತು ಮನಸ್ಸನ್ನು ಒಂದಾಗಿಸಿ ಪ್ರಕೃತಿಯೊಂದಿಗೆ ಜೋಡಿಸುವ ಮಹಾನ್ ಶಕ್ತಿ ಯೋಗಕ್ಕಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ಹೇಳಿದ್ದಾರೆ. ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಜಿಲ್ಲೆಯ
Yoga has the power to connect the body and mind with nature.


Yoga has the power to connect the body and mind with nature.


Yoga has the power to connect the body and mind with nature.


ಕೊಪ್ಪಳ, 21 ಜೂನ್ (ಹಿ.ಸ.);

ಆ್ಯಂಕರ್ : ಮನುಷ್ಯನ ದೇಹ ಮತ್ತು ಮನಸ್ಸನ್ನು ಒಂದಾಗಿಸಿ ಪ್ರಕೃತಿಯೊಂದಿಗೆ ಜೋಡಿಸುವ ಮಹಾನ್ ಶಕ್ತಿ ಯೋಗಕ್ಕಿದೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು ಹೇಳಿದ್ದಾರೆ.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಜಿಲ್ಲೆಯ ಸರ್ವಯೋಗ ಸಂಸ್ಥೆಗಳ ಸಹಯೋಗದಲ್ಲಿ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ-2026ರ ಅಂಗವಾಗಿ ``ಆರೋಗ್ಯಕರ ವೃದ್ದಾಪ್ಯಕ್ಕಾಗಿ ಯೋಗ'' ಎಂಬ ಘೋಷವಾಕ್ಯದೊಂದಿಗೆ ಕೊಪ್ಪಳ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ (ಜೂ. 21ರಂದು) ಹಮ್ಮಿಕೊಳ್ಳಲಾಗಿದ್ದ ಯೋಗ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜೂನ್ 21 ರಂದು ಇಡೀ ವಿಶ್ವವೇ ಯೋಗ ದಿನವನ್ನು ಆಚರಿಸುತ್ತಿದೆ. ಇದು ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವಂತಹ ದಿನವಾಗಿದೆ. ಯೋಗದ ಇತಿಹಾಸ ವಿಶೇಷವಾಗಿದೆ. ಯೋಗವು ಸಾವಿರಾರು ವರ್ಷಗಳಷ್ಟು ಹಳೆಯದಾದ ಭಾರತದ ಸಂಸ್ಕೃತಿ ಮತ್ತು ಋಷಿಮುನಿಗಳ ಕೊಡುಗೆಯಾಗಿದೆ. ಯೋಗ ದಿನಾಚರಣೆಯನ್ನು ಜಾಗತಿಕ ಮಟ್ಟದಲ್ಲಿ ಒಂದು ವಿಶೇಷ ದಿನವನ್ನಾಗಿ ಆಚರಿಸುವ ಕುರಿತಂತೆ ಭಾರತವು ಮಾಡಿದ ಪ್ರಸ್ತಾಪಕ್ಕೆ ವಿಶ್ವಸಂಸ್ಥೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು. ವಿಶ್ವದ 177 ದೇಶಗಳು ಈ ನಿರ್ಣಯಕ್ಕೆ ಸಹಿ ಹಾಕಿದವು. ಇದರ ಫಲವಾಗಿ 2015ರ ಜೂನ್ 21 ರಂದು ಇಡೀ ವಿಶ್ವದಲ್ಲಿ ಮೊದಲ ಬಾರಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ'ಯನ್ನು ಅತ್ಯಂತ ಸಡಗರದಿಂದ ಆಚರಿಸಲಾಯಿತು. ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ ಜೂನ್ 21 ರಂದು ವಿಶ್ವದಾದ್ಯಂತ ಯೋಗ ಹಬ್ಬವನ್ನು ಆಚರಿಸಲಾಗುತ್ತಿದೆ ಎಂದರು.

ಇವತ್ತಿನ ಆಧುನಿಕ ಯುಗದಲ್ಲಿ ಯೋಗದ ಮಹತ್ವ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇಂದಿನ ಒತ್ತಡದ ಬದುಕು, ಮಾಲಿನ್ಯ ಮತ್ತು ತಪ್ಪು ಜೀವನಶೈಲಿಯಿಂದಾಗಿ ಮನುಷ್ಯ ರೋಗಗಳ ಗೂಡಾಗುತ್ತಿದ್ದಾನೆ. ಇಂತಹ ಸಂದರ್ಭದಲ್ಲಿ ಯೋಗವು ನಮಗೆ ಸಂಜೀವಿನಿಯಂತೆ ಕೆಲಸ ಮಾಡುತ್ತದೆ. ಯೋಗ ಎಂದರೆ ಕೇವಲ ತೂಕ ಇಳಿಸುವ ಅಥವಾ ದೇಹವನ್ನು ಬಗ್ಗಿಸುವ ಕಸರತ್ತಲ್ಲ, ಅದು ದಿನನಿತ್ಯದ ಆಸನಗಳು, ಪ್ರಾಣಾಯಾಮ ಮತ್ತು ಧ್ಯಾನದ ಮೂಲಕ ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮನಸ್ಸಿನ ಆತಂಕ, ಖಿನ್ನತೆ ಮತ್ತು ಒತ್ತಡವನ್ನು ದೂರ ಮಾಡಿ ಮಾನಸಿಕ ಶಾಂತಿಯನ್ನು ನೀಡುತ್ತದೆ. ಯೋಗವನ್ನು ನಾವು ಕೇವಲ ವರ್ಷಕ್ಕೊಮ್ಮೆ ಜೂನ್ 21 ರಂದು ಮಾತ್ರ ಆಚರಿಸುವ ಹಬ್ಬವನ್ನಾಗಿ ಮಾಡಬಾರದು. ಬದಲಿಗೆ, ನಮ್ಮ ದೈನಂದಿನ ಜೀವನದ ಒಂದು ಅವಿಭಾಜ್ಯ ಅಂಗವಾಗಿಸಿಕೊಳ್ಳಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಮಾತನಾಡಿ, ಯೋಗವು ಭಾರತದ ಭವ್ಯ ಪರಂಪರೆಯ ಪ್ರತೀಕವಾಗಿದೆ. ಪ್ರತಿದಿನದ ಯೋಗಾಭ್ಯಾಸ ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಲಿದೆ. ಪ್ರಧಾನಿ ನರೇಂದ್ರ ಮೋದಿಜಿಯವರ ಪ್ರಯತ್ನದಿಂದ ವಿಶ್ವದಾದ್ಯಂತ ಯೋಗ ದಿನಾಚರಣೆಯನ್ನು ಆಚರಿಸುವ ಮೂಲಕ ಯೋಗದ ಮಹತ್ವವನ್ನು ಜಗತ್ತಿಗೆ ತಿಳಿಸಲಾಗಿದೆ. ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರಿಗೂ ಯೋಗ ಬಹಳ ಮುಖ್ಯವಾಗಿದೆ. ``ಯೋಗ ಭಾರತ-365'' ಕಾರ್ಯಕ್ರಮದ ಮೂಲಕ ಆಯುಷ್ ಇಲಾಖೆಯ ಪ್ರತಿನಿತ್ಯ ಆನ್ಲೈನ್ ಮೂಲಕ ಯೋಗ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸಂತೋಷದ ಸಂಗತಿಯಾಗಿದೆ ಎಂದರು.

ಆಯುಷ್ ವೈದ್ಯಾಧಿಕಾರಿಗಳಾದ ಡಾ. ವೈ.ಜೆ. ಶಿರವಾರ ಅವರು ಯೋಗಾಭ್ಯಾಸ ನಡೆಸಿಕೊಟ್ಟರು. ಪ್ರಜಾಪಿತ ಬ್ರಹ್ಮ ಕುಮಾರಿ ವಿಶ್ವವಿದ್ಯಾಲಯದ ಯೋಗಿನಿ ಅಕ್ಕನವರು ಜ್ಞಾನ ಕಾರ್ಯಕ್ರಮ ನಡೆಸಿಕೊಟ್ಟರು.

*ಗಮನ ಸೆಳೆದ ಮಕ್ಕಳ ಯೋಗ ಪ್ರದರ್ಶನ:* ಪುಟ್ಟ ಬಾಲಕ ಅಗಸ್ತ್ಯ ಅರಕೇರಿ, ವಿದ್ಯಾರ್ಥಿನಿ ರೇಷ್ಮಾ ಹಾಗೂ ಸಂಗಡಿಗರು ಮತ್ತು ಕುಮಾರ ಸಿದ್ದಾರ್ಥ ಅವರಿಂದ ನಡೆದ ವಿಶೇಷ ಯೋಗ ಪ್ರದರ್ಶನ ಗಮನ ಸೆಳೆಯಿತು. ಈ ಎಲ್ಲಾ ಮಕ್ಕಳಿಗೆ ಹಾಗೂ ಯೋಗ ತರಬೇತಿ ನೀಡಿದ ಯೋಗ ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಬಿ. ಇಟ್ನಾಳ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ದರಾಮೇಶ್ವರ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳಾದ ಟಿ.ಕೃಷ್ಣಮೂರ್ತಿ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಪಿ.ಬಿ.ಹಿರೇಗೌಡರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಗದೀಶ್, ಜಿಲ್ಲಾ ಕ್ರೀಡಾ ಅಧಿಕಾರಿಗಳಾದ ವಿಠ್ಠಲ್ ಬಿ.ಜಾಬಗೌಡರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಎ.ಬಸವರಾಜ, ಕೊಪ್ಪಳ ತಾಲ್ಲೂಕು ಪಂಚಾಯತ ಇಓ ದುಂಡಪ್ಪ ತುರಾದಿ, ಕೊಪ್ಪಳ ಜಿಲ್ಲೆಯ ಆಯುಷ್ ವೈದ್ಯಾಧಿಕಾರಿಗಳಾದ ಡಾ. ಗುರುರಾಜ್ ಉಮಚಗಿ, ಡಾ. ವಿ.ಆರ್ ತಾಳಿಕೋಟಿ, ಡಾ. ಶರಣಪ್ಪ ಹೈದ್ರಿ, ಡಾ. ರಾಜಶೇಖರ ನಾರಿನಾಳ, ಡಾ. ಕವಿತಾ ಹೆಚ್.ಎಫ್. ಹಾಗೂ ಇತರೆ ವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂಧಿಗಳು, ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಶಾಲಾ ಕಾಲೇಜುಗಳ ವಿಧ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರತಿ ಮನೆಯಲ್ಲಿ ಅಮೃತ ಬಳ್ಳಿ ಬೆಳಸಬೇಕು ಎಂಬ ಉದ್ದೇಶದಿಂದ ಆಯುಷ್ ಇಲಾಖೆಯಿಂದ ಅಮೃತ ಬಳ್ಳಿಯ ತುಂಡುಗಳ ವಿತರಣೆ ಮಾಡಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande