
ವಿಜಯಪುರ, 22 ಜೂನ್ (ಹಿ.ಸ.) :
ಆಂಕರ್ : ಸಣ್ಣ ನೀರಾವರಿ ಇಲಾಖೆಯ ವತಿಯಿಂದ ವಿಜಯಪುರ ಜಿಲ್ಲೆಯ ಸಿಂದಗಿ ಮತಕ್ಷೇತ್ರದ ಆಲಮೇಲ ತಾಲೂಕಿನ ರೈತರಿಗೆ ಅನುಕೂಲವಾಗುವ ಮಹತ್ವದ ನೀರಾವರಿ ಕಾಮಗಾರಿಗಳು ಪ್ರಗತಿಯಲ್ಲಿವೆ. ತಾಲೂಕಿನ ಮದನಹಳ್ಳಿ ಗ್ರಾಮ ಹಾಗೂ ಆಲಮೇಲ ಪಟ್ಟಣ ವ್ಯಾಪ್ತಿಯ ಪರಿಶಿಷ್ಟ ಜಾತಿ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಭೀಮಾ ನಂದಿಯಿಂದ ಪೈಪ್ಲೈನ್ ಅಳವಡಿಕೆ ಕಾಮಗಾರಿಗೆ ಶಾಸಕ ಅಶೋಕ್ ಮನಗೂಳಿ ಚಲನೆ ನೀಡಿದ್ದರು.
ಈ ಯೋಜನೆಯಡಿ ಸೋಮನಾಥ ಮೇಲಿನಮನಿ, ಶ್ರೀಮತಿ ಸುನಂದಾ ನಾಯ್ಕೋಡಿ, ಭೀಮು ಬಮ್ಮನಹಳ್ಳಿ, ಸಂತೋಷ್ ಮೇಲಿನಮನಿ ಸೇರಿದಂತೆ ಹಲವು ರೈತರ ಜಮೀನುಗಳಿಗೆ ನೀರು ಪೂರೈಕೆ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಈಗಾಗಲೇ ಪೈಪ್ಲೈನ್ ಕಾಮಗಾರಿ ವೇಗವಾಗಿ ನಡೆಯುತ್ತಿದ್ದು, ಪೂರ್ಣಗೊಂಡ ಬಳಿಕ ರೈತರ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ.
ನೀರಿನ ಕೊರತೆಯಿಂದಾಗಿ ಹಲವು ವರ್ಷಗಳಿಂದ ಕೃಷಿ ಕಾರ್ಯಗಳಲ್ಲಿ ತೊಂದರೆ ಅನುಭವಿಸುತ್ತಿದ್ದ ರೈತರಿಗೆ ಈ ಯೋಜನೆ ಆಶಾಕಿರಣವಾಗಿದ್ದು, ನೀರಾವರಿ ಸೌಲಭ್ಯ ದೊರೆಯುವುದರಿಂದ ಬೆಳೆ ಉತ್ಪಾದನೆ ಹೆಚ್ಚಳ, ಆರ್ಥಿಕ ಅಭಿವೃದ್ಧಿ ಹಾಗೂ ಕೃಷಿಯಲ್ಲಿ ಸ್ಥಿರತೆ ಸಾಧಿಸಲು ಸಹಕಾರಿಯಾಗಲಿದೆ ಎಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ.
ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸುತ್ತಿದ್ದು, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ರೈತರಿಗೆ ನೀರಿನ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಯೋಜನೆಯಿಂದ ಮದನಹಳ್ಳಿ ಹಾಗೂ ಆಲಮೇಲ ಭಾಗದ ರೈತರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande