ಆಲಮೇಲಕ್ಕೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
ವಿಜಯಪುರ, 22 ಜೂನ್ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಆಲಮೇಲ ಪಟ್ಟಣಕ್ಕೆ ಜೂನ್ 25, 2026 ರಂದು ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಆಗಮಿಸಲಿರುವ ಹಿನ್ನೆಲೆಯಲ್ಲಿ, ಅವರ ಭೇಟಿಯ ಅಂಗವಾಗಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಪೂರ್ವಸಿದ್ಧತಾ ಕಾರ್ಯಗಳ ಕುರಿತು
ಸಿಂದಗಿ


ವಿಜಯಪುರ, 22 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಆಲಮೇಲ ಪಟ್ಟಣಕ್ಕೆ ಜೂನ್ 25, 2026 ರಂದು ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಆಗಮಿಸಲಿರುವ ಹಿನ್ನೆಲೆಯಲ್ಲಿ, ಅವರ ಭೇಟಿಯ ಅಂಗವಾಗಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಪೂರ್ವಸಿದ್ಧತಾ ಕಾರ್ಯಗಳ ಕುರಿತು ಸಮಾಲೋಚನಾ ಸಭೆ ನಡೆಯಿತು.

ಸಿಂದಗಿ ಕ್ಷೇತ್ರದ ಶಾಸಕ ಅಶೋಕ್ ಮನಗೂಳಿ ಅವರು ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿ, ಸಚಿವರ ಆಗಮನದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚಿಸಿದರು.

ಸಚಿವರ ಕಾರ್ಯಕ್ರಮವು ಯಾವುದೇ ತೊಂದರೆಗಳಿಲ್ಲದೆ ಯಶಸ್ವಿಯಾಗಿ ನಡೆಯುವಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ ಅವರು, ಸ್ಥಳ ಪರಿಶೀಲನೆ, ಸಾರ್ವಜನಿಕರ ವ್ಯವಸ್ಥೆ, ಮೂಲಸೌಕರ್ಯ ಸಿದ್ಧತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸಚಿವ ಸತೀಶ್ ಜಾರಕಿಹೊಳಿ ಅವರ ಭೇಟಿಯು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವ ನಿರೀಕ್ಷೆ ಮೂಡಿಸಿದ್ದು, ಆಲಮೇಲ ಪಟ್ಟಣದಲ್ಲಿ ನಡೆಯಲಿರುವ ಕಾರ್ಯಕ್ರಮದತ್ತ ಸಾರ್ವಜನಿಕರ ಗಮನ ಸೆಳೆದಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande