
ಕೋಲಾರ, ಜೂ.೨೨ (ಹಿ.ಸ) :
ಆ್ಯಂಕರ್ : ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಸ್ವಾಭಿಮಾನಿ ಬಿ.ಕೃಷ್ಣಪ್ಪ ಬಣ ಕೋಲಾರ ಜಿಲ್ಲಾ ಶಾಖೆ ವತಿಯಿಂದ ಸ್ವಾಭಿಮಾನಿ ಬಿ.ಕೃಷ್ಣಪ್ಪ ರವರ ಹುಟ್ಟುಹಬ್ಬದ ಪ್ರಯುಕ್ತ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾದ ಸುಮಾರು ೫೦ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ತಾಲೂಕಿನ ಕೆಂಬೋಡಿ ಬಾಲಕರ ವಸತಿ ನಿಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ವಿ.ನಾರಾಯಣಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ದಾನಿಗಳು ನೀಡುವ ಸಾಮಾಗ್ರಿಗಳನ್ನು ಸದುಪಯೋಗಪಡಿಸಿಕೊಂಡು ಪೋಷಕರು ಮತ್ತು ಶಿಕ್ಷಕರಿಗೆ ಗೌರವ ತರುವಂತಾಗಬೇಕೆAದು ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘಟನೆಯ ಜಿಲ್ಲಾ ಸಂಚಾಲಕ ಡಿ.ಚಿಕ್ಕಣ್ಣ ಮಾತನಾಡಿ, ವಿದ್ಯಾರ್ಥಿಗಳು ಬರೀ ಅಂಕಗಳಿಗೆ ಸೀಮಿತವಾಗದೆ ಒಳ್ಳೆಯ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮವು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಕೆಂಬೋಡಿ ರವೀಂದ್ರ ಕುಮಾರ್ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಅವರು, ಪ್ರತಿ ವರ್ಷವೂ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗುರುತಿಸಿ ಇದೇ ರೀತಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಂಶುಪಾಲ ಟಿ.ಜಯರಾಮ್, ಕೆಂಬೋಡಿ ಗ್ರಾಮದ ಹಿರಿಯ ಮುಖಂಡರಾದ ಎಂ. ನಾರಾಯಗೌಡ, ನಿವೃತ್ತ ಶಿಕ್ಷಣ ಸಂಯೋಜಕ ಎಂ.ವೆ0ಕಟಗಿರಿಯಪ್ಪ, ಜನತಾ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಸಿ.ಎಸ್. ಚಂದ್ರಪ್ಪ, ವಡಗೇರಿ ಮುನಿಯಪ್ಪ, ಕರಡಗೂರ್ಕಿ ಶೇಷಾದ್ರಿ, ವೇಮಗಲ್ ಸುಧಾಕರ್, ಡಾ.ಬಿ.ಆರ್.ಅಂಬೇಡ್ಕರ್ ವಸತಿ ನಿಲಯದ ಅಡುಗೆ ಸಿಬ್ಬಂದಿಗಳು ಹಾಗೂ ಹಾಸ್ಟೆಲ್ ವಾರ್ಡನ್ ವೆಂಕಟಾಚಲಪತಿ, ಕೋಲಾರ ತಾಲ್ಲೂಕು ಸಂಚಾಲಕ ಶೆಟ್ಟಿಮಾದಮಂಗಲ ರಾಜಣ್ಣ, ಇನ್ನು ಅನೇಕ ಮುಖಂಡರು ಹಾಗೂ ಊರಿನ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್