
ನವದೆಹಲಿ, 23 ಜೂನ್ (ಹಿ.ಸ.) :
ಆ್ಯಂಕರ್ : ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಇಂದು ಆರಂಭಿಕ ವಹಿವಾಟಿನ ವೇಳೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಚೆನ್ನೈ ಹೊರತುಪಡಿಸಿ ದೇಶದ ಬಹುತೇಕ ಪ್ರಮುಖ ನಗರಗಳಲ್ಲಿ ಚಿನ್ನದ ದರವು 10 ಗ್ರಾಂಗೆ ₹420ರಿಂದ ₹450ರವರೆಗೆ ಹೆಚ್ಚಾಗಿದೆ. ಆದರೆ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಚಿನ್ನದ ಬೆಲೆ ಏರಿಕೆಯಿಂದಾಗಿ ದೇಶದ ವಿವಿಧ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನವು 10 ಗ್ರಾಂಗೆ ₹1,46,520ರಿಂದ ₹1,48,360ರ ನಡುವೆ ವಹಿವಾಟು ನಡೆಸುತ್ತಿದೆ. ಅದೇ ರೀತಿ 22 ಕ್ಯಾರೆಟ್ ಚಿನ್ನವು 10 ಗ್ರಾಂಗೆ ₹1,34,310ರಿಂದ ₹1,35,990ರ ನಡುವೆ ಮಾರಾಟವಾಗುತ್ತಿದೆ.
ಬೆಳ್ಳಿ ದರದಲ್ಲಿ ಬದಲಾವಣೆ ಆಗದ ಕಾರಣ, ದೆಹಲಿ ಮಾರುಕಟ್ಟೆಯಲ್ಲಿ ಒಂದು ಕಿಲೋಗ್ರಾಂ ಬೆಳ್ಳಿಯ ಬೆಲೆ ₹2,49,900ರಲ್ಲಿಯೇ ಸ್ಥಿರವಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.