
ಕೋಲಾರ, ೨೩ ಜೂನ್ (ಹಿ.ಸ) :
ಆ್ಯಂಕರ್ : ಭೂಮಾಪಕರ ಮುಷ್ಕರದಿಂದ ಸರ್ವೆ ಕೆಲಸ ಸಂಪೂರ್ಣ ಸ್ಥಗಿತಗೊಂಡಿರುವುದರಿ0ದ ಸರ್ಕಾರ ಕೂಡಲೇ ಅವರ ಬೇಡಿಕೆಗಳನ್ನು ಪರಿಗಣಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕೆಂದು ದಲಿತ ಸಂಘರ್ಷ ಸಮಿತಿ ಭೀಮಮಾರ್ಗ ಸಂಘಟನೆ ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಬಂಗಾರಪೇಟೆ ನಗರದ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ರಾಜ್ಯ ಸಂಘಟನಾ ಸಂಚಾಲಕ ಡಿ.ಎನ್. ಸುಭಾಷ್ಚಂದ್ರ ಮೂರ್ತಿ ರಾಜ್ಯಾದ್ಯಂತ ಸುಮಾರು ನಾಲ್ಕು ತಿಂಗಳಿ0ದ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಭೂಮಾಪಕರು ಮುಷ್ಕರ ನಡೆಸುತ್ತಿದ್ದಾರೆ. ಸರ್ಕಾರ ಹಾಗೂ ಸಂಬ0ಧಪಟ್ಟ ಅಧಿಕಾರಿಗಳು ಅವರ ಬೇಡಿಕೆಗಳನ್ನು ಬಗೆಹರಿಸದೆ ಇರುವುದರಿಂದ ರಾಜ್ಯದ್ಯಂತ ಸಾರ್ವಜನಿಕರಿಗೆ ಹಾಗೂ ರೈತರಿಗೆ ತಮ್ಮ ದೈನಂದಿನ ಕೆಲಸಗಳಿಗೆ ಭೂದಾಖಲೆಗಳು ಸಿಗದೇ ಪರದಾಟವಾಗಿದೆ. ಕೆಲ ಸಂದರ್ಭದಲ್ಲಿ ನ್ಯಾಯಾಲಯಗಳಲ್ಲಿ ಭೂದಾಖಲೆಗಳು ಸಲ್ಲಿಸಲು ಆಗದೆ ಪರದಾಡುವಂತಾಗಿದೆ.
ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ದುಃಸ್ಥಿತಿ ಏರ್ಪಟ್ಟಿದ್ದು. ಸರ್ಕಾರಕ್ಕೆ ಬರುವ ಬಹುದೊಡ್ಡ ಮಟ್ಟದ ಆರ್ಥಿಕ ನೆರವು ನಷ್ಟವಾಗುತ್ತಿರುವುದರಿಂದ ಸಾರ್ವಜನಿಕರ ಹಿತಾಸಕ್ತಿಯನ್ನು ಮನಗಂಡು ಮುಖ್ಯ ಮಂತ್ರಿಗಳು ಮತ್ತು ಅಧಿಕಾರಿಗಳು ಈ ಕೂಡಲೇ ಭೂಮಾಪಕರ ಬೇಡಿಕೆಗಳ ಪೈಕಿ ಕನಿಷ್ಠ ಅಗತ್ಯ ಬೇಡಿಕೆಗಳನ್ನಾದರೂ ಪೂರೈಸುವ ಮೂಲಕ ಅವರ ಮುಷ್ಕರವನ್ನು ನಿಲ್ಲಿಸಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆ ವತಿಯಿಂದ ರಾಜ್ಯಾದ್ಯಂತ ಹಂತ ಹಂತವಾಗಿ ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸಂಚಾಲಕರಾದ ಬಿ.ಎಂ.ಸಾಕಪ್ಪ, ವೆಂಕಟೇಶ್, ಚಲಪತಿ, ಅಲ್ತಾಫ್ ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್