ಬಳ್ಳಾರಿ : ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳ ಭರ್ತಿಗೆ ಕೌನ್ಸೆಲಿಂಗ್
ಬಳ್ಳಾರಿ, 24 ಜೂನ್ (ಹಿ.ಸ.) : ಆ್ಯಂಕರ್ : ಈದ್ಗಾ ರಸ್ತೆಯ ಹಿರಿಯಾಳ್ ಕುಡಂನಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2026-27ನೇ ಸಾಲಿನ 6ನೇ ತರಗತಿಯ ಖಾಲಿ ಇರುವ ಒಟ್ಟು 27 ಸೀಟುಗಳ ಭರ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮೂಲಕ ದಾಖಲಾತಿ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ
ಬಳ್ಳಾರಿ : ಆದರ್ಶ ವಿದ್ಯಾಲಯದ 6ನೇ ತರಗತಿ ಖಾಲಿ ಸೀಟುಗಳ ಭರ್ತಿಗೆ ಕೌನ್ಸೆಲಿಂಗ್


ಬಳ್ಳಾರಿ, 24 ಜೂನ್ (ಹಿ.ಸ.) :

ಆ್ಯಂಕರ್ : ಈದ್ಗಾ ರಸ್ತೆಯ ಹಿರಿಯಾಳ್ ಕುಡಂನಲ್ಲಿರುವ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ 2026-27ನೇ ಸಾಲಿನ 6ನೇ ತರಗತಿಯ ಖಾಲಿ ಇರುವ ಒಟ್ಟು 27 ಸೀಟುಗಳ ಭರ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಗೆ ಕೌನ್ಸೆಲಿಂಗ್ ಮೂಲಕ ದಾಖಲಾತಿ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.

ಅರ್ಹ ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಮೊದಲನೇ ಹಂತದಿಂದ ಮೂರನೇ ಹಂತದವರೆಗೆ ಆಯ್ಕೆಯಾದ ಮಕ್ಕಳನ್ನು ಹೊರತುಪಡಿಸಿ, ಅಂಕಗಳ ಜ್ಯೇಷ್ಠತೆ ಹಾಗೂ ಹುಟ್ಟಿದ ದಿನಾಂಕದ ಆಧಾರದ ಮೇಲೆ ಮಕ್ಕಳ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ವಿದ್ಯಾ ವಾಹಿನಿಯಲ್ಲಿ ಲಭ್ಯವಿರುವ ಮಾಹಿತಿಯಂತೆ 1:30 ಅನುಪಾತದಲ್ಲಿ ಅರ್ಹ ಮಕ್ಕಳನ್ನು ಕೌನ್ಸೆಲಿಂಗ್ಗೆ ಕರೆಯಲಾಗುತ್ತದೆ.

ದಾಖಲಾತಿ ಕೌನ್ಸೆಲಿಂಗ್ ವೇಳಾಪಟ್ಟಿ:

ಸಾಮಾನ್ಯ ವರ್ಗ- ಜೂ.29

ಮೀಸಲಾತಿ ವರ್ಗ- ಜೂ.30

ಕೌನ್ಸೆಲಿಂಗ್ ಪ್ರಕ್ರಿಯೆಯು ನಿಗದಿತ ದಿನಗಳಂದು ಬೆಳಿಗ್ಗೆ 10 ಗಂಟೆಗೆ ಶಾಲೆಯಲ್ಲಿ ಪ್ರಾರಂಭವಾಗಲಿದ್ದು, ಪಾಲಕರು ಮತ್ತು ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಹಾಜರಿರಬೇಕು. ದಾಖಲಾತಿ ಕೌನ್ಸೆಲಿಂಗ್ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸಬೇಕಾಗುತ್ತದೆ. ನಿಗದಿತ ಸಮಯಕ್ಕೆ ಹಾಜರಾಗದಿದ್ದಲ್ಲಿ, ಗೈರುಹಾಜರಾದವರಿಗೆ ಮತ್ತೊಮ್ಮೆ ಅವಕಾಶ ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಪಶ್ಚಿಮ ವಲಯದ ಸರ್ಕಾರಿ ಆದರ್ಶ ವಿದ್ಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande