ಮೊಹರಂ ಹಬ್ಬದ ಆಚರಣೆ ಪ್ರಯುಕ್ತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ
ಕೊಪ್ಪಳ, 24 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲೆಯಾದ್ಯಂತ ಮೊಹರಂ ಹಬ್ಬದ ಆಚರಣೆಯ ಪ್ರಯುಕ್ತ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರನ್ವಯ ಜೂನ್
ಮೊಹರಂ ಹಬ್ಬದ ಆಚರಣೆ ಪ್ರಯುಕ್ತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ


ಕೊಪ್ಪಳ, 24 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲೆಯಾದ್ಯಂತ ಮೊಹರಂ ಹಬ್ಬದ ಆಚರಣೆಯ ಪ್ರಯುಕ್ತ ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ-1965 ರ ಕಲಂ 21 ರನ್ವಯ ಜೂನ್ 25 ರ ಬೆಳಿಗ್ಗೆ 6 ಗಂಟೆಯಿಂದ ಜೂನ್ 26 ರ ರಾತ್ರಿ 11 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಡಾ.ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದನ್ವಯ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ, ಅದರಲ್ಲಿ ಆರಕ್ಷಕರ ವೃತ್ತ ನಿರೀಕ್ಷಕರು ಹಾಗೂ ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಸೂಚಿಸಿದೆ.

ಆದೇಶವನ್ನು ಅನುಷ್ಠಾನಗೊಳಿಸುವಲ್ಲಿ ನಿರ್ಲಕ್ಷ್ಯತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande